ತುಮಕೂರು: ಪ್ರತಿನಿತ್ಯ ಪೊಲೀಸರು ತನಿಖೆ ಹೆಸರಿನಲ್ಲಿ ಜ್ಯೂವೆಲ್ಲರಿ ಮಾಲೀಕರು ಹಾಗೂ ಗಿರವಿ ಅಂಗಡಿ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಚಿನ್ನದಂಗಡಿ ಮಾಲೀಕ ಜೆ.ಪಿ.ಜೈನ್ ಆರೋಪಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಸ್‌ಆರ್ ಪೊಲೀಸ್ ಠಾಣೆಯ ಸಿಬ್ಬಂದಿ ಏಕಾಏಕಿ ತುಮಕೂರಿನ ಜ್ಯೂವೆಲರಿ ಅಂಗಡಿಗಳಿಗೆ ಬಂದು ಅಂಗಡಿ ಮಾಲೀಕರನ್ನು ಕಳ್ಳರ ರೀತಿ ಖಾಸಗಿ ವಾಹನದಲ್ಲಿ ಕರೆದೊಯ್ದ ವಿರುದ್ಧ ಚಿನ್ನದಂಗಡಿ ಮಾಲೀಕರು ಅಂಗಡಿಗಳನ್ನು ಬಂದ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಪ್ರತಿನಿತ್ಯ ಪೊಲೀಸರು ತನಿಖೆ ಹೆಸರಿನಲ್ಲಿ ಅಂಗಡಿಗಳಿಗೆ ಬಂದು ಇಲ್ಲಸಲ್ಲದ ಆರೋಪ ಮಾಡಿ ಸುಖಾಸುಮ್ಮನೆ ಚಿನ್ನದ ಅಂಗಡಿ ಮಾಲೀಕರ ಹೆದರಿಸಿ ಬೆದರಿಸಿ ವಸೂಲಿಗೆ ಇಳಿದಿದ್ದಾರೆ, ಪ್ರತಿನಿತ್ಯ ಹೊರ ಜಿಲ್ಲೆಗಳಿಂದ ಬರುವ ಪೊಲೀಸರು ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಏಕಾಏಕಿ ಬಂದು ವ್ಯಾಪಾರಿಗಳಿಗೆ ತೊಂದರೆ ಹಾಗೂ ಕಿರುಕುಳ ನೀಡುತ್ತಿದ್ದಾರೆ, ಇನ್ನೂ ಏನಾದರೂ ಕೇಳಲು ಹೋದರೆ ಇಲ್ಲಸಲ್ಲದ ಆರೋಪ ಮಾಡಿ ನಮ್ಮ ಮೇಲೆ ಕೇಸ್ ಹಾಕುತ್ತೇವೆ ಎಂದು ಹೆದರಿಸಿ ಲಕ್ಷಾಂತರ ಹಣ ವಸೂಲಿ ಮಾಡುತ್ತಾರೆ ಎಂದು ಚಿನ್ನದ ಅಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದರು.
ಹೊರ ಜಿಲ್ಲೆಗಳಿಂದ ಬರುವ ಪೊಲೀಸರು ಆರೋಪಿಗಳ ಹೆಸರಿನಲ್ಲಿ ಕೆಲವರನ್ನು ಕರೆತಂದು ಯಾವುದೇ ದಾಖಲೆ ಇಲ್ಲದೆ ಇದ್ದರೂ ಚಿನ್ನ ನೀಡಿರುತ್ತೇವೆ, ಅವುಗಳನ್ನು ರಿಕವರಿ ಮಾಡಲು ಬಂದಿದ್ದೇವೆ ಎಂದು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾರೆ, ಇಂತಹ ಕಿರುಕುಳದ ಮಧ್ಯೆ ನಾವು ವ್ಯಾಪಾರ ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ನಮ್ಮ ಅಂಗಡಿಗಳ ಕೀಲಿ ಕೈಗಳನ್ನು ಪೊಲೀಸರಿಗೆ ನೀಡಲಿದ್ದೇವೆ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಕಷ್ಟು ಬಾರಿ ಪೊಲೀಸರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ, ಇಂತಹ ಆತಂಕದ ನಡುವೆ ನಾವು ವ್ಯಾಪಾರ ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ, ಇನ್ನೂ ಪೊಲೀಸರು ಒಂದು ಲಕ್ಷಾಂತರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಜ್ಯೂವೆಲ್ಲರಿ ಬಂದ್ ಮಾಡಿ ಆಕ್ರೋಶ- ನ್ಯಾಯಕ್ಕಾಗಿ ಆಗ್ರಹ
ಚಿನ್ನದಂಗಡಿ ಮಾಲೀಕರಿಗೆ ಖಾಕಿ ಕಿರುಕುಳ
Get real time updates directly on you device, subscribe now.
Comments are closed.