ಓದಲು ಇಷ್ಟವಿಲ್ಲದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

217

Get real time updates directly on you device, subscribe now.


ಕೊರಟಗೆರೆ: ಸಿದ್ದಗಂಗಾ ಫಾರ್ಮಸಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಚಂದ್ರು ಎಂಬ ವಿದ್ಯಾರ್ಥಿ ತಮ್ಮ ಅಡಿಕೆ ಸುಲಿಯುವ ಶೆಡ್ಡಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಗಡ್ಡೋಬನಹಳ್ಳಿ ಗ್ರಾಮದ ಹನುಮಂತರಾಯಪ್ಪ ಎಂಬಾತನ ಮಗನಾದ ಚಂದ್ರು (17) ಆತ್ಮಹತ್ಯೆಗೆ ಶರಣಾದ ದುರ್ದೈವಿ.
ವ್ಯಾಸಂಗದಲ್ಲಿ ಸೋಲುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ. ಪಿಎಸೈ ಮಹಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಳಾಲ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!