ಶಿರಾ: ತಾಲೂಕು ಕ್ರೀಡಾಂಗಣಕ್ಕೆ ಅವಶ್ಯವಿರುವ 4 ಎಕರೆ ಜಾಗ ಗುರುತಿಸಿ ಕ್ರೀಡಾಂಗಣ ಉನ್ನತ್ತೀಕರಣಗೊಳಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ತಿಳಿಸಿದರು.
ಶಿರಾ ತಾಲೂಕಿನ ಕ್ರೀಡಾಂಗಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರೀಡಾಂಗಣ ಅಭಿವೃದ್ಧಿಗೊಳಿಸುವ ಸಂಬಂಧ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ ಸಚಿವರು, ಕ್ರೀಡಾಂಗಣದ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುತ್ತೇನೆ, ಆದಷ್ಟು ಬೇಗ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಆರಂಭಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ರೇಷ್ಮೆ ಬೆಳೆಗಾರರ ಜೊತೆಯೂ ಮಾತುಕತೆ ನಡೆಸಿದ ಸಚಿವರು, ಬೆಳಗಾರರ ಅಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿ, ರೇಷ್ಮೆ ಇಲಾಖೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ, ರೇಷ್ಮೆ ಮಾರುಕಟ್ಟೆಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ತಪ್ಪಿಸಲು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಹೇಳಿದರು.
ರೇಷ್ಮೆ ಉಪ ಮಾರುಕಟ್ಟೆ ಸ್ಥಾಪನೆಯ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿ ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶಿರಾ ತಾಲೂಕಿನಲ್ಲಿ ಹೆಚ್ಚಿನ ರೇಷ್ಮೆ ಬೆಳಗಾರರಿದ್ದು, ರೇಷ್ಮೆ ಮನೆಗಳ ಸಂಖ್ಯೆ ಹೆಚ್ಚಿಸಬೇಕು ಎಂಬ ಮನವಿಗೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.
ಈ ವೇಳೆ ಶಾಸಕ ಡಾ.ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಕೆಎಸ್‌ಐಸಿ ಅಧ್ಯಕ್ಷ ಎಸ್.ಆರ್. ಗೌಡ ಸೇರಿದಂತೆ ಹಲವರು ಇದ್ದರು.
ಶಿರಾದ ಕ್ರೀಡಾಂಗಣ ಉನ್ನತ್ತೀಕರಣಕ್ಕೆ ಕ್ರಮ: ನಾರಾಯಣ ಗೌಡ
Get real time updates directly on you device, subscribe now.
Prev Post
Comments are closed.