ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಕ್ರಮ

163

Get real time updates directly on you device, subscribe now.

ತುಮಕೂರು: ಯಾವ್ಯಾವ ಸಮುದಾಯಗಳು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿವೆ ಅಂತಹ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಪ್ರಗತಿಯ ಬಗ್ಗೆ ದತ್ತಾಂಶಗಳ ಸಂಗ್ರಹಣೆ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನೊಳಂಬ ಮತ್ತು ಪಂಚಮಸಾಲಿ ಸಮುದಾಯಗಳ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು.
ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವರದಿ ಆಯೋಗದ ಬಳಿ ಇದ್ದು, ಅದು ಸರ್ಕಾರಕ್ಕೆ ಇನ್ನು ಸಲ್ಲಿಕೆಯಾಗಿಲ್ಲ, ತುಮಕೂರು ಜಿಲ್ಲೆಯಲ್ಲಿರುವ ನೊಳಂಬ ಮತ್ತು ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಮನವಿ ಬಂದಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸುವ ಕೆಲಸ ಮಾಡಲಾಗುವುದು ಎಂದರು.
ಈ ವೇಳೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸದಸ್ಯರಾದ ಕಲ್ಯಾಣ್‌ ಕುಮಾರ್‌, ರಾಜಶೇಖರ್‌, ಅರುಣ್‌ ಕುಮಾರ್‌, ಜಿಪಂ ಸಿಇಒ ವಿದ್ಯಾಕುಮಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್‌.ಸುಬ್ರಾನಾಯಕ್‌, ದೇವರಾಜ ಅರಸ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಭಕ್ತಕುಚೇಲ ಸೇರಿದಂತೆ ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!