ಬಿಜೆಪಿ ಎಂ.ಎಲ್.ಸಿ ಅಭ್ಯರ್ಥಿಗಳನ್ನು ಗೆಲ್ಲಿಸಿ

179

Get real time updates directly on you device, subscribe now.

ಕುಣಿಗಲ್‌: ಜನಪರ ಹಿತಾಸಕ್ತಿಯಿಂದ ವಿಧಾನಸಭೆಯಲ್ಲಿ ಜಾರಿಗೊಳಿಸಿದ ಕಾಯಿದೆಗಳು ವಿಧಾನ ಪರಿಷತ್ತಿನಲ್ಲಿ ಬಹುಮತ ಇಲ್ಲದೆ ಜಾರಿಗೆ ತೊಂದರೆಯಾಗುತ್ತಿದೆ. ವಿಧಾನಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಸಿಗುವ ನಿಟ್ಟಿನಲ್ಲಿ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲಾ ಮತದಾರರು ಶ್ರಮಿಸಬೇಕೆಂದು ಜಿಲ್ಲಾಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು.
ಸೋಮವಾರ ಸಂಜೆ ಪಟ್ಟಣದಲ್ಲಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ಪರಿಷತ್ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾನೂನು ಸಚಿವನಾದ ನಾನು ದುರ್ಯೋಧನನ ಹಾಗೆ ಕೆಲಸ ಮಾಡಬೇಕು, ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದೆ ಜನಪರ ಕಾಯಿದೆ ಜಾರಿ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಓಲೈಕೆ ಮಾಡಲು ನಾರದನ ಹಾಗೆ ಕೆಲಸ ಮಾಡಬೇಕಿದೆ. ಮತದಾರರು ಯೋಚಿಸಿ ನಿಮ್ಮ ಮತಗಳ ಜೊತೆಯಲ್ಲಿ ಇತರೆ ಮತಗಳು ಬಿಜೆಪಿಗೆ ಹೆಚ್ಚು ಹೆಚ್ಚು ಬರುವ ನಿಟ್ಟಿನಲ್ಲಿ ಶ್ರಮಿಸಬೇಕು, ಜೆಡಿಎಸ್‌ ಪಕ್ಷಕ್ಕೆ ಭವಿಷ್ಯವಿಲ್ಲ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಧೃಢವಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಹೆಚ್ಚುಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತಮ ಯೋಜನೆ ನೀಡಿದೆ ಇವುಗಳ ಬಗ್ಗೆ ಅರಿವು ಮೂಡಿಸಿ, ತಾಲೂಕಿನಲ್ಲಿ ಬಿಜೆಪಿಗೆ ಹೆಚ್ಚು ಮತ ಸಿಗುವ ಹಾಗೆ ಮಾಡಬೇಕು ಎಂದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಸುರೇಶಗೌಡ ಮಾತನಾಡಿ, ಕುಣಿಗಲ್‌ ತಾಲೂಕಿನಲ್ಲಿ ಬಿಜೆಪಿಗೆ ಒಳ್ಳೆ ನೆಲೆ ಇದೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಹಂತದ ಕಾರ್ಯಕರ್ತರು ಶ್ರಮಿಸಬೇಕು, ತಾಲೂಕಿನ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಪ್ರಶ್ನೆ ಇಲ್ಲ, ಯಾರೂ ಏನಾದರೂ ಹೇಳಿಕೊಳ್ಳಲಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿ.ಕೃಷ್ಣಕುಮಾರ್ ಅವರಿಗೆ ಟಿಕೆಟ್‌ ಕೊಡಿಸುತ್ತೇನೆ, ತಾಲೂಕಿನಲ್ಲಿ ಆಗಬೇಕಿರುವ ಬಹಳಷ್ಟು ಕಾರ್ಯಗಳು ಪೂರ್ಣಗೊಳ್ಳಲು ಎಲ್ಲಾ ಹಂತದ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು, ಪಕ್ಷದಲ್ಲಿನ ಸಣ್ಣಪುಟ್ಟ ಗೊಂದಲಗಳನ್ನು ನಾವೆ ನಿಂತು ಬಗೆಹರಿಸುತ್ತೇನೆ ಎಂದರು.
ಪಿ.ಎಲ್.ಡಿ ಬ್ಯಾಂಕ್‌ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್‌, ತಾಲೂಕಿನಿಂದ ಈಬಾರಿ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ, ತಾಲೂಕಿನ ನೀರಾವರಿ, ವಸತಿ ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸಬೇಕು ಎಂದರು.
ಮುಖಂಡರಾದ ಡಾ.ಹುಲಿನಾಯ್ಕರ್, ವೈ.ಎಚ್‌.ಹುಚ್ಚಯ್ಯ ಮಾತನಾಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಬಲರಾಮ್‌, ಪ್ರಮುಖರಾದ ಸುಜಾತ ಚಂದ್ರಶೇಖರ್‌, ದೇವರಾಜು, ದಿಲೀಪ್‌, ಧನುಷ್‌, ಅನೂಪ್‌, ರೂಪಾ, ಗೌರಮ್ಮ ಸೇರಿದಂತೆ ಗ್ರಾಪಂ ಸದಸ್ಯರು, ಪುರಸಭೆ ಸದಸ್ಯರು ಉಪಸ್ಥಿತರಿದ್ದು ಪುರಸಭೆ ನಾಮಿನಿ ಸದಸ್ಯರಿಗೆ ಮತದಾನದ ಹಕ್ಕನ್ನು ನೀಡುವಂತೆ ಮನವಿ ಮಾಡಿದರು.

Get real time updates directly on you device, subscribe now.

Comments are closed.

error: Content is protected !!