ತುಮಕೂರು: ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮತ ಎಣಿಕಾ ಕೇಂದ್ರದಲ್ಲಿ ಕೈಗೊಳ್ಳಬಹುದಾದ ಪೂರ್ವ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಪರಿಶೀಲನೆ ನಡೆಸಿದರು.
ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮತ ಎಣಿಕಾ ಕೊಠಡಿ, ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಅವರು ಎಣಿಕಾ ಕೇಂದ್ರಕ್ಕೆ ಪೊಲೀಸ್ ಭದ್ರತೆ ಒದಗಿಸುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವೇಳೆ ಮಾತನಾಡಿದ ಅವರು, ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಸಂಬಂಧ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಸುಗಮ ಚುನಾವಣೆಗೆ ಬೇಕಿರುವ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕೇಂದ್ರವನ್ನಾಗಿ ಮಾಡಲು ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಮತ ಎಣಿಕಾ ಕೇಂದ್ರದ ಪೂರ್ವ ಸಿದ್ಧತೆ ಪರಿಶೀಲನೆ
Get real time updates directly on you device, subscribe now.
Prev Post
Comments are closed.