ಬಿಜೆಪಿಯಿಂದ ಜನ ಸ್ವರಾಜ್ ಯಾತ್ರೆ 19ಕ್ಕೆ

335

Get real time updates directly on you device, subscribe now.

ತುಮಕೂರು: ಮುಂಬರುವ ಡಿಸೆಂಬರ್ 10 ರಂದು ನಡೆಯುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ಬಿಜೆಪಿ ಪಕ್ಷದ ವತಿಯಿಂದ ಜನ ಸ್ವರಾಜ್ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ಹಿನ್ನೆಲೆಯಲ್ಲಿ ಮತದಾರರಾಗಿರುವ ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಬೆಂಬಲಿತ ಸದಸ್ಯರು ಹಾಗೂ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರನ್ನು ಒಂದೆಡೆ ಸೇರಿಸಿ ಮತದಾರರನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಜನ ಸ್ವರಾಜ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ನಾಲ್ಕು ಕಡೆ ಜನ ಸ್ವರಾಜ್ ಯಾತ್ರೆ ನಡೆಯುತ್ತಿದ್ದು, ತುಮಕೂರು, ದಾವಣಗೆರೆ, ಚಿತ್ರದುರ್ಗ, ರಾಮನಗರ ಜಿಲ್ಲೆಗಳನ್ನು ಒಳಗೊಂಡ ಯಾತ್ರೆ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ನಡೆಯಲಿದ್ದು, ಇಡೀ ಯಾತ್ರೆಯ ರೂಪುರೇಷೆಗಳನ್ನು ಮಹೇಶ್ ತೆಂಗಿನ ಕಾಯಿ ಮತ್ತು ತುಳಿಸಿ ಮುನಿರಾಜುಗೌಡ ಅವರ ಉಸ್ತುವಾರಿಯಲ್ಲಿ ನಡೆಯಲಿದೆ ಎಂದರು.
ನ.19 ರಂದು ತುಮಕೂರು ನಗರದ ಗಾಜಿನಮನೆಯಲ್ಲಿ ನಡೆಯುವ ಬಿಜೆಪಿ ಜನ ಸ್ವರಾಜ್ ಯಾತ್ರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಅಶ್ವತ್ಥ ನಾರಾಯಣ, ಎ.ನಾರಾಯಣಸ್ವಾಮಿ, ಮಾಧುಸ್ವಾಮಿ, ಬಿ.ಸಿ.ನಾಗೇಶ್, ಬಿ.ವೈ.ವಿಜಯೇಂದ್ರ, ಅವರ ತಂಡ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಮತ ಯಾಚನೆ ಮಾಡಲಿದ್ದಾರೆ ಎಂದರು.
ಜನ ಸ್ವರಾಜ್ ಯಾತ್ರೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಮುಖಂಡರು, ಗ್ರಾಪಂ ಸದಸ್ಯರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದು, ಎಲ್ಲಾ ಮುಖಂಡರೊಂದಿಗೆ ಚುನಾವಣೆಯಲ್ಲಿ ಭಾಗವಹಿಸಲು ಯೋಜನೆ ರೂಪಿಸಿದ್ದೇವೆ ಎಂದರು.
ಬಿಜೆಪಿ ಸಂಸದರು, ಐವರು ಶಾಸಕರು ಜಿಲ್ಲೆಯಲ್ಲಿದ್ದಾರೆ, 1800 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ, ಕಳೆದ ಬಾರಿ ಸಂಸದರಿಲ್ಲದೆ ಪಡೆದುಕೊಂಡಿದ್ದ ಮತಕ್ಕಿಂತ ಹೆಚ್ಚು ಮತಗಳನ್ನು ಪಡೆದುಕೊಂಡು ಬಿಜೆಪಿ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ಎಂ.ಬಿ.ನಂದೀಶ್ ವ್ಯಕ್ತಪಡಿಸಿದರು.
ವಿಧಾನಪರಿಷತ್ ಚುನಾವಣೆಗೆ ತುಮಕೂರು ಜಿಲ್ಲೆಯಿಂದ ಮಾಜಿ ಎಂ.ಎಲ್.ಸಿ ಡಾ.ಎಂ.ಆರ್.ಹುಲಿನಾಯ್ಕರ್, ಅಂಬಿಕಾ ಹುಲಿನಾಯ್ಕರ್, ವೈ.ಎಚ್.ಹುಚ್ಚಯ್ಯ, ರಾಜೇಶ್ ಗೌಡ ಸೇರಿದಂತೆ ಐವರು ಅಭ್ಯರ್ಥಿಗಳಿದ್ದು, ನಾಳೆ ಸಂಜೆ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ ಎಂದು ತಿಳಿಸಿದರು.
ಜನಸ್ವರಾಜ್ ಯಾತ್ರೆ ಸಾಮೂಹಿಕ ನೇತೃತ್ವದಲ್ಲಿ ನಡೆಯಲಿದ್ದು, ರಾಜ್ಯದ ನಾಲ್ಕು ಕಡೆಗಳಲ್ಲಿ ಜನಸ್ವರಾಜ್ ಯಾತ್ರೆ ನಡೆಯಲಿದೆ, ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಬಿ.ಸುರೇಶ್ ಗೌಡ, ಹೆಬ್ಬಾಕ ರವಿ, ವೈ.ಹೆಚ್.ಹುಚ್ಚಯ್ಯ, ಬಿ.ಕೆ.ಮಂಜುನಾಥ್ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!