ನಿಟ್ಟೂರು: ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಕಾರೇಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಿಗೆ ಅಲ್ಲಲ್ಲಿ ತೋಟದ ಸಾಲುಗಳಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು, ಇದರಿಂದ ಆತಂಕಗೊಂಡ ಗ್ರಾಮಸ್ಥರು ಇಲ್ಲಿಗೆ ಬೋನು ಇಟ್ಟು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಕಳೆದ 2 ದಿನಗಳಿಂದ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿ ಅಂಕಾಪುರ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು, ಮಂಗಳವಾರ ತಡರಾತ್ರಿ 4 ವರ್ಷದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದ್ದು, ಈ ಭಾಗದಲ್ಲಿ ಓಡಾಡುತ್ತಿದ್ದ ಚಿರತೆ ಸೆರೆಯಾಗಿದೆ.
ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು ಸಿಬ್ಬಂದಿ ಕರಿಯಪ್ಪ ಮುನಿಯು ಜಿರಾವ್ ಕುತುಬುದ್ದೀನ್ ಹಾಗೂ ಇನ್ನಿತರರು ಕಾರ್ಯಾಚರಣೆಯಲ್ಲಿ ತೊಡಗಿದ್ದು ದೂರದ ಅರಣ್ಯ ಪ್ರದೇಶಕ್ಕೆ ಚಿರತೆ ಸಾಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೋನಿಗೆ ಬಿದ್ದ ಚಿರತೆ
Get real time updates directly on you device, subscribe now.
Prev Post
Next Post
Comments are closed.