ಅಟವಿ ಸ್ವಾಮೀಜಿಯ ಪುಣ್ಯ ಸ್ಮರಣೆ 19ಕ್ಕೆ

128

Get real time updates directly on you device, subscribe now.

ತುಮಕೂರು: ಇತಿಹಾಸ ಪ್ರಸಿದ್ದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಸುಕೇತ್ರದ ಮೂಲ ಗುರುಗಳಾದ ಅಟವಿ ಸ್ವಾಮೀಜಿ ಅವರ 121ನೇ ವರ್ಷದ ಪುಣ್ಯ ಸ್ಮರಣೆ,ಲಕ್ಷ ದೀಪೋತ್ಸವ ಹಾಗೂ ಆಟವಿಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್‌ 19ರ ಶುಕ್ರವಾರ ಹಮ್ಮಿಕೊಂಡಿರುವುದಾಗಿ ಅಟವಿ ಸುಕ್ಷೇತ್ರದ ಶಿವಲಿಂಗ ಮಹಾಸ್ವಾಮೀಜಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್‌ 19ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮ ಜರುಗಲಿದ್ದು,ಬೆಳಗ್ಗೆ 11 ರಿಂದ 1.30 ರವರೆಗೆ ಶ್ರೀಅಟವೀ ಶಿವಲಿಂಗ ಮಹಾಸ್ವಾಮಿಜೀಗಳ ಸಾನಿಧ್ಯ ಹಾಗೂ ಕುಮಾರ ದಿಂಗಾಲೇಶ್ವರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ 243ನೇ ಮಾಸಿಕ ಶಿವಾನುಭವ ಅಂಗೈಯಲ್ಲಿ ಅನುಭಾವ ಗೋಷ್ಠಿ ನಡೆಯಲಿದೆ. ಗವಿ ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಮಹಾ ಸ್ವಾಮೀಜಿ, ಸಿದ್ದರಬೆಟ್ಟದ ವೀರಭದ್ರಶಿವಾಚಾರ್ಯ ಮಹಾ ಸ್ವಾಮೀಜಿ, ಬೆಳ್ಳಾವಿಯ ಕಾರದೇಶ್ವರ ಮಠದ ಕಾರದ ವೀರಬಸವ ಮಹಾ ಸ್ವಾಮೀಜಿ, ಗುದ್ದುಗೇಶ್ವರ ಮಹಾ ಸ್ವಾಮೀಜಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಸಂಜೆ 4.30 ಗಂಟೆಗೆ ಕಾರ್ತೀಕ ಲಕ್ಷ ದೀಪೋತ್ಸವ ಹಾಗೂ ಅಟವೀಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ಕುಮಾರ ದಿಂಗಾಲೇಶ್ವರ ಮಹಾ ಸ್ವಾಮೀಜಿಯವರ ಸಾನಿಧ್ಯದಲ್ಲಿ, ಕೊರಟಗೆರೆ ಶಾಸಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್‌ ಅವರಿಗೆ ಅಟವೀಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಲಿದ್ದು, ಸಚಿವರಾದ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್‌ ಜೊಲ್ಲೆ, ಮೇಲ್ಮೆನೆ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ್‌, ತುಮಕೂರು ಸಂಸದ ಜಿ.ಎಸ್‌.ಬಸವರಾಜು, ಶಾಸಕ ಜಿ.ಬಿ.ಜೋತಿಗಣೇಶ್‌ ಭಾಗವಹಿಸುವರು. ಸಂಜೆ 7 ಗಂಟೆಗೆ ಕಾರ್ತಿಕ ಮಾಸದ ಅಂಗವಾಗಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ. ನಂತರ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಸ್ವಾಮೀಜಿ ವಿವರ ನೀಡಿದರು.
ಅಟವಿ ಸುಕ್ಷೇತ್ರದ ಗೋ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಟಿ.ಬಿ.ಶೇಖರ್‌ ಮಾತನಾಡಿ, ನೂರಾರು ವರ್ಷಗಳ ಇತಿಹಾಸವಿರುವ ಅಟವೀ ಮಠಕ್ಕೆ ಅಟವಿ ಶಿವಲಿಂಗ ಸ್ವಾಮೀಜಿ ಪೀಠಾಧ್ಯಕ್ಷರಾದ ನಂತರ ಹಂತ ಹಂತವಾಗಿ ಮಠ ಪ್ರವರ್ಧಮಾನಕ್ಕೆ ಬಂದಿದ್ದು, ಇಂದು ಗೋಶಾಲೆಯ ಜೊತೆಗೆ, ವಿದ್ಯಾಸಂಸ್ಥೆ, ವಿದ್ಯಾರ್ಥಿ ನಿಲಯಗಳನ್ನು ತೆರೆದು ಮಕ್ಕಳಿಗೆ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಂಚಕರ್ಮ ಚಿಕಿತ್ಸೆ ಒಳಗೊಂಡ ಆಯುರ್ವೇದ ಆಸ್ಪತ್ರೆ ತೆರೆಯಬೇಕೆಂಬ ಹಂಬಲ ಸ್ವಾಮೀಜಿ ಅವರದ್ದಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವೀರಶೈವ, ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮೋಹನ್‌ ಪಟೇಲ್‌, ರೇಣುಕಾರಾಧ್ಯ ಸೇರಿದಂತೆ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!