ಭೀಕರ ಅಪಘಾತ- ಬೈಕ್‌ ಸವಾರ ಸಾವು

367

Get real time updates directly on you device, subscribe now.

ತುಮಕೂರು: ಬೈಕ್‌ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ತುಮಕೂರು ತಾಲೂಕಿನ ಹೆಗ್ಗೆರೆ ಬಳಿ ಈ ದುರ್ಘಟನೆ ನಡೆದಿದ್ದು, ಲಾರಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಚಿಂದಿ ಚಿಂದಿಯಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇದರ ಜೊತೆಗೆ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್‌ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!