ಗೌರಿಶಂಕರ್‌ ನೀಡಿದ ಲಸಿಕೆ ನಕಲಿ?

322

Get real time updates directly on you device, subscribe now.

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಶಾಸಕ ಡಿ.ಸಿ.ಗೌರಿಶಂಕರ್‌ ನೇತೃತ್ವದಲ್ಲಿ ಕೋವಿಡ್‌-19 ಸೋಂಕು ನಿಯಂತ್ರಣಕ್ಕಾಗಿ ನೀಡಿರುವ ಲಸಿಕೆ ನಕಲಿ ಇರಬಹುದೆಂದು ಸಾಮಾಜಿಕ ಕಾರ್ಯಕರ್ತ ಕೆ.ಸಿ.ಗಿರೀಶ್‌ ಶಂಕೆ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಲಸಿಕಾ ದಾಸ್ತಾನು ಮತ್ತು ಜನರಿಗೆ ನೀಡಿರುವುದರಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ದಾಖಲೆಗಾಗಿ ಹೆಚ್ಚಿನ ಜನರಿಗೆ ನೀಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದಿರುವ ದಾಖಲೆಗಳಲ್ಲಿ ವ್ಯಕ್ತವಾಗುತ್ತಿದೆ ಎಂದು ದಾಖಲೆ ಬಿಡುಗಡೆ ಮಾಡಿದರು.
ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‌ ಈ ತಾಲೂಕಿನ ಹೆಬ್ಬೂರು ಹೋಬಳಿ ಬಳಗೆರೆ ಗ್ರಾಮದ ತಮ್ಮ ನಿವಾಸದಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿಯಮಗಳಿಗೆ ವಿರುದ್ಧವಾಗಿದ್ದು, ಶಾಸಕರಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಲಸಿಕೆ ತರಿಸಿಕೊಂಡಿರುವುದು ಕಡಿಮೆ ಇದ್ದು ಜನರಿಗೆ ನೀಡಿರುವುದು ಹೆಚ್ಚು ಪ್ರಮಾಣದಲ್ಲಿದೆ, ಇದು ಅನುಮಾನಕ್ಕೆ ಎಡೆಮಾಡಿಕೊಡುತ್ತಿದ್ದು, ಬಿಸ್ತೇರಿ ನೀರು, ಇಲ್ಲವೆ ಡಿಸ್ಟಿಲ್‌ ವಾಟರ್‌ ನೀಡಿರುವ ಶಂಕೆ ಇದೆ, ಈ ಬಗ್ಗೆ ಸಂಬಂಧಿಸಿವರು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲಾ ಆರೋಗ್ಯಾ ಧಿಕಾರಿ, ಆರ್.ಸಿ.ಹೆಚ್.ಒ ಮತ್ತು ತಾಲೂಕು ಆರೋಗ್ಯ ಅಧಿಕಾರಿ, ಆಸ್ಪತ್ರೆ ಪ್ರಾಧಿಕಾರ ಸಹಕಾರಿಯ ಹೆಲ್ತ್ ಕೇರ್ ಮತ್ತು ಲೈಫ್ ಸ್ಟೈಲ್‌ ಸೇವೆಗಳು, ಕಲ್ಯಾಣ ನಗರ, ಬೆಂಗಳೂರು ಇವರು ಸೂಕ್ತ ಕಾನೂನು ಕ್ರಮ ತೆಗೆದು ಕೊಳ್ಳುವಂತೆ ಒತ್ತಾಯಿಸಿದರು.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರು, ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ಸಂಬಂಧಿಸಿದ ಶಾಸಕರು ಮತ್ತು ಅಧಿಕಾರಿಗಳ ವಿರುದ್ಧ ದೂರು ನೀಡಿರುವುದಾಗಿ ತಿಳಿಸಿದರು.
ಗಿರೀಶ್‌ ಅವರಿಗೆ ಮಾಹಿತಿ ಹಕ್ಕು ಅಧಿನಿಯಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ತುಮಕೂರು ಅವರು ಅರ್ಜಿದಾರರು ಕೋರಿರುವಂತೆ ಕೆಲವೊಂದು ಮಾಹಿತಿಗಳನ್ನು ದಾಖಲೆ ಸಹಿತ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಹರೀಶ್‌, ಸ್ವಾಮಿ, ಎಂ.ರವೀಂದ್ರ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!