ತುಮಕೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಭಾರತದ ಸಂವಿಧಾನ ಸಭೆಯಲ್ಲಿ 1949ರ ನವೆಂಬರ್ 26ರಂದು ಭಾರತ ಸಂವಿಧಾನವನ್ನು ಅಂಗೀಕರಿಸಲ್ಪಟ್ಟ ದಿನದ ಸವಿನೆನಪಿಗಾಗಿ ಕೇಂದ್ರ ಸರ್ಕಾರದ ಸೂಚನೆಯಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪ್ರಸ್ತಾವನೆ ಓದುವ ಮೂಲಕ ಸಂವಿಧಾನ ದಿನ ಆಚರಿಸಲಾಯಿತು.
ಸಂವಿಧಾನ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರೊಂದಿಗೆ ವಿವಿಧ ಅಧಿಕಾರಿಗಳು ಪಾಲ್ಗೊಂಡು ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿಗೌರವ, ರಾಷ್ಟ್ರದ ಏಕತೆ ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆ ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ, ನಮ್ಮ ಸಂವಿಧಾನ ಸಭೆಯಲ್ಲಿ 1949ನೇಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಕಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಪ್ರಸ್ತಾವನೆ ಓದುವ ಮೂಲಕ ಸಂವಿಧಾನ ದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ
Get real time updates directly on you device, subscribe now.
Prev Post
Comments are closed.