ತುಮಕೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರ ಧಾರೆಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿರದೆ ಎಲ್ಲಾ ಸಮುದಾಯಕ್ಕೂ ಸೀಮಿತವಾಗಿವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದ ಸರಳ ಆಚರಣೆಯಲ್ಲಿ ಮಾತನಾಡಿ, ದೇಶಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದುದು. ಅವರ ಆದರ್ಶಗಳು ಸಾರ್ವಕಾಲಿಕ ಎಂದರಲ್ಲದೆ, ಇಂದಿನ ಪೀಳಿಗೆಯ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಅಂಬೇಡ್ಕರ್ ಅವರು ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಸಹಾಯಕ ನಿರ್ದೇಶಕ ಶಿವಣ್ಣ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ: ಜಿಲ್ಲಾಧಿಕಾರಿ
Get real time updates directly on you device, subscribe now.
Prev Post
Next Post
Comments are closed.