ತುಮಕೂರು: ರಾಜ್ಯ ಚುನಾವಣಾ ಆಯೋಗವು ಶಿರಾ ನಗರಸಭೆ 31 ವಾರ್ಡ್ ಗಳ ಸಾರ್ವತ್ರಿಕ ಚುನಾವಣೆ ನಡೆಸಲು ವೇಳಾಪಟ್ಟಿ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ವೇಳಾಪಟ್ಟಿಯನ್ವಯ ಡಿಸೆಂಬರ್ 8 ರಂದು ಚುನಾವಣಾ ನೋಟೀಸ್ ಪ್ರಕಟಿಸಲಾಗಿದ್ದು, ಡಿಸೆಂಬರ್ 15 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರಗಳ ಪರಿಶೀಲನೆಯನ್ನು ಡಿಸೆಂಬರ್ 16 ರಂದು ನಡೆಸಲಾಗುವುದು. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಡಿಸೆಂಬರ್ 18 ಕಡೆಯ ದಿನವಾಗಿದೆ. ಮತದಾನ ಡಿಸೆಂಬರ್ 27 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಮರು ಮತದಾನದ ಅವಶ್ಯವಿದ್ದಲ್ಲಿ ಡಿ.29 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ನಡೆಸಲಾಗುವುದು. ಮತಗಳ ಎಣಿಕೆಯು ಡಿಸೆಂಬರ್ 30 ರ ಬೆಳಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರದಲ್ಲಿ ನಡೆಯಲಿದ್ದು, ಡಿಸೆಂಬರ್ 30 ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಡಿಸೆಂಬರ್ 8 ರಿಂದ 30ರ ವರೆಗೆ ಜಾರಿಯಲ್ಲಿದ್ದು, ಡಿಸೆಂಬರ್ 11 ರಂದು ಎರಡನೇ ಶನಿವಾರ ಸಾರ್ವತ್ರಿಕ ರಜಾ ದಿನವಾದ್ದರಿಂದ ಅಂದು ನಾಮಪತ್ರ ಸಲ್ಲಿಸಲು ಅವಕಾಶವಿಲ್ಲ. ಶಿರಾ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಸದಾಚಾರ ಸಂಹಿತೆ ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.
ಶಿರಾ ನಗರಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟ
Get real time updates directly on you device, subscribe now.
Comments are closed.