ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ವಿರೋಧ

ಅಧಿಕಾರಿಗಳ ನಡೆಗೆ ಗ್ರಾಮಸ್ಥರ ಆಕ್ರೋಶ

170

Get real time updates directly on you device, subscribe now.

ತುಮಕೂರು: ಗುಬ್ಬಿ ತಾಲೂಕಿನ ಸಿ.ಎಸ್‌.ಪುರ ಹೋಬಳಿಗೆ ಕೆಂಚನಹಳ್ಳಿ ಗ್ರಾಮದಲ್ಲಿ ಸಿ.ಎಸ್‌.ಪುರ ಗ್ರಾಮ ಪಂಚಾಯಿತಿ ವತಿಯಿಂದ ಘನ ತ್ಯಾಜ್ಯ ವಿಲೇವಾರಿ ಘಟಕ ಮಾಡಲು ಮುಂದಾಗಿರುವುದನ್ನು ಖಂಡಿಸಿ ಕೆಂಚನಹಳ್ಳಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ತುಮಕೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥರು, ಕೆಂಚನಹಳ್ಳಿ ಗ್ರಾಮದ ಸರ್ವೆ ನಂ.80 ಮತ್ತು 81 ರಲ್ಲಿ ಸರ್ಕಾರಿ ಜಾಗವಿದ್ದು ಈ ಜಾಗದಲ್ಲಿ ಕಳೆದ 40 ವರ್ಷಗಳಿಂದ ಹಲವು ಕುಟುಂಬದವರು ಜಮೀನು ಉಳುಮೆ ಮಾಡಿಕೊಂಡಿದ್ದು ಅನುಭವದಾರರು ಜಮೀನು ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದರು ಸಹ ಯಾವುದಕ್ಕೂ ಮನ್ನಣೆ ನೀಡದೆ ಏಕಾಏಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಆಡಳಿತ ವರ್ಗ ಉಳುಮೆ ಮಾಡುತ್ತಿರುವ ರೈತ ಕುಟುಂಬಕ್ಕೆ ಯಾವುದೇ ನೋಟಿಸ್‌ ನೀಡದೆ ಜಾಗ ತೆರವು ಮಾಡುವಂತೆ ರೈತರಿಗೆ ಪೊಲೀಸರನ್ನು ಕರೆದುಕೊಂಡು ಬಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳ ನಡೆ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಈ ಘಟಕವು ಕೆಂಚನಹಳ್ಳಿ ಗ್ರಾಮಕ್ಕೆ 50 ರಿಂದ 60 ಮೀಟರ್‌ ದೂರವಿದ್ದು ಇಲ್ಲಿ ಘಟಕ ಸ್ಥಾಪನೆ ಮಾಡಿದರೆ ಗ್ರಾಮದಲ್ಲಿ ವಾಸಿಸುತ್ತಿರುವ ಜನತೆಯು ರೋಗ ರುಜಿನಗಳಿಗೆ ತುತ್ತಾಗುವ ಆತಂಕ ಒಂದೆಡೆಯಾದರೆ ಘನ ತ್ಯಾಜ್ಯ ದ ದುರ್ವಾಸನೆಯಿಂದ ಗ್ರಾಮಸ್ಥರು ಸಾಯುವ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಿರುವುದು ಖಂಡನೀಯ ಎಂದರು.
ಗ್ರಾಮ ಪಂಚಾಯಿತಿ ಆಡಳಿತ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೆ ನಂ. 62 ರ ಪೈಕಿ ಬೇರೆಡೆ ಸಾಕಷ್ಟು ಜಾಗವಿದ್ದು ಉದ್ದೇಶ ಪೂರ್ವಕವಾಗಿ ಈ ಜಾಗದಲ್ಲಿ ಘಟಕ ನಿರ್ಮಾಣ ಕ್ಕೆ ಮುಂದಾಗಿರುವುದು ಸರಿಯಲ್ಲ, ದಯವಿಟ್ಟು ಸಂಬಂಧ ಪಟ್ಟ ಜಿಲ್ಲಾಧಿಕಾರಿಯವರು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವ ಮೂಲಕ ರೈತರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಲಕ್ಷೀನಾರಾಯಣ್‌, ಸಮಾಜ ಸೇವಕ ರಂಗನಾಥ, ಫೈರೋಜ್‌, ಅಲ್ತಾಫ್‌, ಜಮೀರ್‌ ಅಹ್ಮದ್‌, ಹನುಮಂತ, ಮರಿಯಣ್ಣ, ವೆಂಕಟೇಶ್‌, ಗೋವಿಂದಯ್ಯ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!