ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಎಬಿವಿಪಿ ಪ್ರತಿಭಟನೆ

311

Get real time updates directly on you device, subscribe now.

ತುಮಕೂರು: ಕೊರೊನಾ ಎರಡನೇ ಅಲೆಗೆ ತತ್ತರಿಸಿದ್ದ ಕರ್ನಾಟಕ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳಿದೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮರು ಪ್ರಾರಂಭವಾಗಿ ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ಶಾಲಾ ಕಾಲೇಜುಗಳಿಗೆ ಬರುತ್ತಿರುವುದು ಸಂತೋಷದ ಸಂಗತಿ, ಆದರೆ ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಕೆಲವೊಂದು ಸಮಸ್ಯೆ ಉದ್ಭವಿಸುತ್ತಿರುವುದು ಶೋಚನಿಯ, ಈ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಇತ್ಯರ್ಥಗೊಳಿಸಬೇಕೆಂದು ಎಬಿವಿಪಿ ನಗರದ ಟೌನ್ ಹಾಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೂ ಬಸ್‌ ಸೇವೆ ಪುನರಾರಂಭಿವಬೇಕು, ಶಾಲಾ- ಕಾಲೇಜು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್‌ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ, ಲಾಕ್ ಡೌನ್‌ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ, ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರಕ್ಕೆ ತೊಂದರೆಯಾಗಿದೆ, ಸಾರಿಗೆ ಇಲಾಖೆಯು ತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್‌ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಶಿಷ್ಯ ವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ, ಡಿಪ್ಲೋಮಾ ಇಂಜಿನಿಯರಿಂಗ್‌, ಸ್ನಾತಕ, ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿಎಚ್‌ಡಿ ಮಾಡುತ್ತಿರುವ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರಕಾರ ಈ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕೆಂದು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತ ಹೆಚ್ಚಿಗೆ ಮಾಡಬೇಕು ಎಂದು ಆಗ್ರಹಿಸಿದರು.
ವಸತಿ ನಿಲಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ, ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳನ್ನು ಅವಲಂಬಿತರಾಗಿದ್ದಾರೆ, ಹೊಸದಾಗಿ ಶಾಲಾ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿ ಆರಂಭವಾಗಿವೆ, ಆದರೆ ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆ ಮುಗಿಯದೇ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರವೂ ತಕ್ಷಣವೇ ಸಂಬಂದಪಟ್ಟ ಅಧಿಕಾರಿಗಳಿಗೆ ವಸತಿ ನಿಲಯಗಳ ಆಯ್ಕೆ ಪ್ರಕಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡುವಂತೆ ಎಬಿವಿಪಿ ಒತ್ತಾಯಿಸುತ್ತದೆ. ರಾಜ್ಯದ ಹಿಂದುಳಿದ ವರ್ಗ, ಸಮಾಜಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಗಳ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಸಂಖ್ಯೆಗೆ ಮತ್ತು ವಸತಿ ನಿಲಯಗಳಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ತುಂಬಾ ಅಂತರವಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರ ತಕ್ಷಣಕ್ಕೆ ವಸತಿ ನಿಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಪ್ರಸಕ್ತ ವರ್ಷದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್‌ಗಳನ್ನು ತೆರೆಯಬೇಕಿದೆ ಮತ್ತು ಹಾಸ್ಟೆಲ್ ಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಒತ್ತಾಯಿಸಿದೆ.
ಪ್ರತಿಭಟನೆಯ ನೇತೃತ್ವವನ್ನು ಎಬಿವಿಪಿಯ ವಿಭಾಗ ಸಂಘಟನಾ ಕಾರ್ಯದರ್ಶೀ ಅಪ್ಪು ಪಾಟೀಲ, ನಗರ ಸಂಘಟನಾ ಕಾರ್ಯದರ್ಶಿ ಶಿವಕುಮಾರ್‌, ನಗರ ಕಾರ್ಯದರ್ಶಿ ಪ್ರತಾಪ್‌ ಸಿಂಹ, ಮದ್ವೇಶ್‌, ಅರ್ಪಿತಾ ಕೆ.ಸಿ., ಜೀವನ್‌, ಬೈರೇಶ್‌, ಪಲ್ಲವಿ, ಮೇಘನಾ, ಮಲ್ಲಿಕಾರ್ಜುನ, ಮಹಾದೇವ, ಶ್ರೀಕಾಂತ ಸ್ವಾಮಿ ವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!