ಕೋಟೆ ಆಂಜನೇಯನಿಗೆ ವಿಶೇಷ ಅಲಂಕಾರ

ಎಲ್ಲೆಡೆ ಹನುಮ ಜಯಂತಿ ಸಂಭ್ರಮ- ದೇಗುಲಗಳಲ್ಲಿ ಹನುಮ ನಾಮ ಸ್ಮರಣೆ

174

Get real time updates directly on you device, subscribe now.

ತುಮಕೂರು: ಕಲ್ಪತರು ನಾಡಿನ ವಿವಿಧೆಡೆ ಆಂಜನೇಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯ, ಬಿ.ಹೆಚ್‌. ರಸ್ತೆಯ ಆರ್‌ಟಿಓ ಕಚೇರಿ ಮುಂಭಾಗದ ಆಂಜನೇಯ ಸ್ವಾಮಿ ದೇಗುಲ, ಬಟವಾಡಿ ಸಮೀಪದ ಆಂಜನೇಯಸ್ವಾಮಿ ದೇವಾಲಯ, ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನೆರವೇರಿದವು.
ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ ಕೇಸರಿ ಧ್ವಜಗಳಿಂದ ಕಂಗೊಳಿಸುತ್ತಿದ್ದು, ಕೋಟೆ ಶ್ರೀಆಂಜನೇಯ ಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ದೇವಾಲಯಕ್ಕೆ ಬರುವ ಭಕ್ತರಿಗೆ ಹೆಸರು ಬೇಳೆ, ಪಾನಕ, ಮಜ್ಜಿಗೆಯನ್ನು ಪ್ರಸಾದವಾಗಿ ನೀಡಲಾಯಿತು.
10ನೇ ವರ್ಷದ ವೈಭವದ ಹನುಮ ಜಯಂತಿ ಪ್ರಯುಕ್ತ ಇದೇ ಮೊದಲ ಬಾರಿಗೆ ಶ್ರೀಕೋಟೆ ಆಂಜನೇಯಸ್ವಾಮಿಯ ರಥೋತ್ಸವ ಅತ್ಯಂತ ವೈಭವಯುತವಾಗಿ ನಡೆಯಿತು, ಶುಕ್ರವಾರ ಬೆಳಗ್ಗೆ 11.30 ಕ್ಕೆ ಕೋಟೆ ಶ್ರೀಆಂಜನೇಯ ಸ್ವಾಮಿಯ ವೈಭವದ ಮೆರವಣಿಗೆಯು ನಗರ ರಾಜಬೀದಿಗಳಲ್ಲಿ ನಡೆಯಲಿದೆ.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷತೆ ಎಂದರೆ ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ, ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ.
ಬೆಳಗ್ಗೆಯಿಂದಲೇ ಭಕ್ತಾದಿಗಳು ಆಂಜನೇಯಸ್ವಾಮಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹನುಮನ ದೇವಾಲಯಗಳಲ್ಲಿ ಶ್ರೀರಾಮ ನಾಮ ಜಪ ಹಾಗೂ ಹನುಮ ನಾಮ ಸ್ಮರಣೆ ಭಕ್ತರಿಂದ ಮೊಳಗಿದವು.

Get real time updates directly on you device, subscribe now.

Comments are closed.

error: Content is protected !!