ತುಮಕೂರು: ನಗರದಲ್ಲಿ ಕೋವಿಡ್-19 ನಿಂದಾಗಿ ಮೃತರಾದ ಕುಟುಂಬಕ್ಕೆ ಬಿಜೆಪಿ ಸರ್ಕಾರದಿಂದ 1.50 ಲಕ್ಷ ರೂ. ಸಹಾಯಧನ ಮಂಜೂರಾಗಿದ್ದು, ಶಾಸಕ ಜಿ.ಬಿ.ಜ್ಯೋತಿಗಣೇಶ್ ಮೃತರ ಕುಟುಂಬಕೆ ಚೆಕ್ ವಿತರಣೆ ಮಾಡಿದರು.
ನಂತರ ಶಾಸಕರು ಮಾತನಾಡಿ ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲಿ ಕೋವಿಡ್ ನಿಂದ ಮೃತಪಟ್ಟವರಲ್ಲಿ ತುಮಕೂರು ನಗರದಲ್ಲಿಯೇ ಹೆಚ್ಚು ಜನ ಕೋವಿಡ್‌ನಿಂದ ಮೃತರಾಗಿರುತ್ತಾರೆ, ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಜಿದಾರರಿಗೆ ಕುಟುಂಬದ ನೋವು ಭರಿಸಲು ಬಿಜೆಪಿ ಸರ್ಕಾರದಿಂದ ಮೃತರ ಕುಟುಂಬಕ್ಕೆ 1 ಲಕ್ಷ ರೂ. ಸಹಾಯಧನ ನೀಡಿದ್ದು, ಅದನ್ನ ಸಂಬಂಧಪಟ್ಟ ಕುಟುಂಬದವರು ಚೆಕ್ ಸ್ವೀಕರಿಸಿದರು ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ಸಹಾಯಧನ ಬ್ಯಾಂಕ್ ಖಾತೆಗೆ ಸಂದಾಯವಾಗಲಿದೆ. ಮೃತರನ್ನ ಕಳೆದುಕೊಂಡ ಕುಟುಂಬಕ್ಕೆ ಸರ್ಕಾರ ನಿಮ್ಮ ಜೊತೆ ಇದೆ ಎನ್ನುವ ನಿಟ್ಟಿನಲ್ಲಿ ಈ ಸಹಾಯಧನ ನೀಡಿದ್ದು, ಮುಂದೆ ಕೋವಿಡ್ ನಿಂದ ಸುರಕ್ಷಿತವಾಗಿರಲು ಮಾಸ್ಕ್ ಹಾಕುವುದು, ಅಂತರ ಕಾಯ್ದುಕೊಳ್ಳುವುದು ಮುಂತಾದ ಸೂಕ್ತ ಕ್ರಮ ಕೈಗೊಳ್ಳುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಬಿಪಿಎಲ್ ಕಾರ್ಡ್ ದಾರರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ಸಹಾಯಧನ ಸಿಗಲಿದೆ. ಎಪಿಎಲ್ ಕಾರ್ಡ್ ದಾರರಿಗೆ ಕೇಂದ್ರ ಸರ್ಕಾರದಿಂದ 50 ಸಾವಿರ ಸಹಾಯಧನ ಸಿಗಲಿದೆ ಮತ್ತು ಉಳಿದ ಮೃತ ಕುಟುಂಬ ವರ್ಗದವರಿಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರು ಮನೆಗೆ ಭೇಟಿ ನೀಡಿ ಚೆಕ್ ವಿತರಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್, ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ್, ಮುಖಂಡರಾದ ಮನೋಹರ್ ಗೌಡ, ಜಗಣ್ಣ ಸತ್ಯಮಂಗಲ ಇತರರು ಇದ್ದರು.
ಕೋವಿಡ್ ನಿಂದ ಮೃತರಾದ ಕುಟುಂಬಕ್ಕೆ ಸಹಾಯಧನ
Get real time updates directly on you device, subscribe now.
Prev Post
Comments are closed.