ಹೊಗೆನಿಕಲ್‌ ಪಾದಯಾತ್ರೆಗೆ ನೋಂದಣಿ ಮಾಡಿಸಿ

144

Get real time updates directly on you device, subscribe now.

ತುಮಕೂರು: ಕಾಂಗ್ರೆಸ್‌ ಶಿರಾ ನಗರಸಭೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆದಿದೆ, ಕಾಂಗ್ರೆಸ್‌ ಪ್ರಾಬಲ್ಯ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಶಾಸಕರನ್ನು ಹೊಂದಲಿದೆ ಎಂದು ಡಿಸಿಸಿ ಅಧ್ಯಕ್ಷ ಆರ್‌.ರಾಮಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14ರಂದು ಜಿಲ್ಲೆಗೆ ಅವಕಾಶ, ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಂದು ಸಾವಿರ ಜನರು ಪಾದಯಾತ್ರೆಯಲ್ಲಿ ಭಾಗಿಯಾಗಬೇಕು, ಬಿಡದಿಯಿಂದ ಪ್ರಾರಂಭವಾಗಲಿರುವ ಯಾತ್ರೆಯಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ, ಭಾಗವಹಿಸುವವರು ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಎಐಸಿಸಿ ಆದೇಶದ ಮೇರೆಗೆ ನಡೆಯಿತ್ತಿರುವ ನೋಂದಣಿ ಮಾಡಬೇಕು, ಆನ್‌ ಲೈನ್‌ ನೋಂದಣಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕೆಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಸೂಚಿಸಿರುವುದಾಗಿ ತಿಳಿಸಿದ ಅವರು, ಪಕ್ಷೇತರರಾಗಿ ಗೆದ್ದಿರುವ ಸದಸ್ಯರೆಲ್ಲರು ಕಾಂಗ್ರೆಸ್‌ ಪಕ್ಷದವರೇ ಆಗಿದ್ದು, ಪಕ್ಷದೊಂದಿಗೆ ಬರುತ್ತಾರೆ ಎನ್ನುವ ವಿಶ್ವಾಸವಿದೆ, ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್‌ ಪಕ್ಷದ ಸಾಧನೆ ಉತ್ತಮವಾಗಿದೆ ಎಂದು ಹೇಳಿದರು.
ಮಾಧ್ಯಮ ವಕ್ತಾರ ಮುರುಳೀಧರ ಹಾಲಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ಜನರ ಒಳಿತಿಗಾಗಿ ಹೋರಾಟ ಮಾಡುತ್ತದೆ. ಪರಿಸರ ಇಲಾಖೆಯ ಒಪ್ಪಿಗೆ ಪಡೆಯಲು ಬಿಜೆಪಿ ಸರಕಾರ ಮೀನಾಮೇಷ ಎಣಿಸುತ್ತಿದೆ. ಈ ಯೋಜನೆಯ ಒಂಭತ್ತು ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ, ಪ್ರತಿ ತಾಲೂಕಿನಿಂದ ಜನರ, ಕಾರ್ಯಕರ್ತರು, ಮುಖಂಡರು ಭಾಗವಹಿಸಬೇಕು, ಪಾದಯಾತ್ರೆ ಕೋವಿಡ್‌ ನಿಯಮಾವಳಿಯಂತೆ ನಡೆಯಲಿದ್ದು, ಸರಕಾರ ಏನೇ ನಿಯಮ ವಿಧಿಸಿದರು ಅದನ್ನು ಪಾಲಿಸುವುದಾಗಿ ಪಕ್ಷದ ಅಧ್ಯಕ್ಷರು ತಿಳಿಸಿದ್ದಾರೆ. ಏನೇ ಆದರೂ ಪಾದಯಾತ್ರೆ ನಿಲ್ಲುವುದಿಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೆಂಚಮಾರಯ್ಯ, ಚಂದ್ರಶೇಖರಗೌಡ, ಮರಿಚೆನ್ನಮ್ಮ, ರವೀಶ್‌, ಸೋಮಣ್ಣ, ಗಂಗಾಧರ್‌, ಸುಜಾತ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!