ಕೊರೊನಾ ಟೆಸ್ಟ್ ಹೆಚ್ಚು ಮಾಡಿ: ಡೀಸಿ

151

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ಕೊರೋನಾ ಪಾಸಿಟೀವ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್‌ ಪರೀಕ್ಷೆ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿತ್ಯ 3400 ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದ್ದು, ತುಮಕೂರು ತಾಲೂಕು 700 ಹಾಗೂ ಎಲ್ಲಾ ತಾಲೂಕುಗಳು ಪ್ರತಿದಿನ ತಲಾ 350ರಂತೆ ಕೋವಿಡ್‌ ಪರೀಕ್ಷೆ ನಡೆಸಬೇಕು. ಪಾಸಿಟೀವ್‌ ಪ್ರಕರಣ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಬೇಕು ಹಾಗೂ ಪರೀಕ್ಷೆ ನಡೆಸಿರುವ ಕುರಿತು 2 ದಿನಗಳೊಳಗೆ ವರದಿ ನೀಡಬೇಕು. ನಿಗದಿತ ಸಮಯದೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಕೋವಿಡ್‌ ಪರೀಕ್ಷೆಗೊಳಪಡಿಸಿದ 24 ಗಂಟೆಗಳೊಳಗೆ ವರದಿ ಸಿದ್ಧಪಡಿಸಬೇಕು, ಜಿಲ್ಲೆಯಲ್ಲಿ ಪ್ರಸ್ತುತ 64 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು, ತೀವ್ರ ನಿಗಾ ಘಟಕದಲ್ಲಿರುವ ಯಾವುದೇ ಪ್ರಕರಣ ಇರುವುದಿಲ್ಲ, ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮತ್ತು ಕೋವಿಡ್‌ ಲಕ್ಷಣ ಕಂಡು ಬಂದವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್‌ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಇದ್ದರು.

Get real time updates directly on you device, subscribe now.

Comments are closed.

error: Content is protected !!