ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ

296

Get real time updates directly on you device, subscribe now.

ತುಮಕೂರು: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ಹೇಳಿದರು.
ನಗರದ ಜಿಲ್ಲಾ ಪೊಲೀಸ್‌ ಇಲಾಖೆಯ ಡಿಎಆರ್‌ ಮೈದಾನದಲ್ಲಿ ಸೋಮವಾರ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟಕ್ಕೆ ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಪೊಲೀಸರು ಸಮಾಜದಲ್ಲಿ ಅಪರಾಧ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸದೆ ಕಾರ್ಯ ನಿರ್ವಹಿಸುತ್ತಾರೆ, ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ವರ್ಷಕ್ಕೊಮ್ಮೆ ಇಂತಹ ಕ್ರೀಡಾ ಕೂಟ ಆಯೋಜಿಸುವುದು ತುಂಬಾ ಆರೋಗ್ಯಕರ ಬೆಳವಣಿಗೆ, ನಿಂದನೆಗಳು, ಸೋಲು- ಗೆಲುವು ಎದುರಾದಾಗ ಯಾವ ರೀತಿ ಎದುರಿಸಬೇಕು ಎಂಬುದನ್ನು ಕ್ರೀಡೆ ಕಲಿಸುತ್ತದೆ ಎಂದರು.
ಸಮಯ, ಶಿಸ್ತು ಪಾಲನೆ ಜೊತೆಗೆ ಧೈರ್ಯವನ್ನು ಪೊಲೀಸ್‌ ಇಲಾಖೆ ಕಲಿಸುತ್ತದೆ, ವರ್ಷಪೂರ್ತಿ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸರು ಕ್ರೀಡೆ ಮೈಗೂಡಿಸಿಕೊಳ್ಳುವುದು ಅನಿವಾರ್ಯ, ಕ್ರೀಡಾಕೂಟದಲ್ಲಿ ವ್ಯಕ್ತಿ ಗೆಲ್ಲುವುದಕ್ಕಿಂತ ಕ್ರೀಡೆ ಗೆಲ್ಲುವುದು ಬಹಳ ಮುಖ್ಯ ಎಂದರು.
ಸಮಾಜದಲ್ಲಿ ನಡೆಯುವ ಅನ್ಯಾಯ, ದೌರ್ಜನ್ಯ ತಡೆಯಲು ಪೊಲೀಸ್‌ ಇಲಾಖೆ ಗಟ್ಟಿಯಾಗಿ ನಿಲ್ಲಬೇಕು, ಕ್ರೀಡೆ ಕೇವಲ ಪೊಲೀಸ್‌ ಇಲಾಖೆಗೆ ಮಾತ್ರ ಸೀಮಿತವಲ್ಲ, ಪ್ರತಿಯೊಬ್ಬ ವ್ಯಕ್ತಿಗೂ ಕ್ರೀಡೆ ಮುಖ್ಯ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಜವಾಬ್ದಾರಿ ಮಹತ್ವದ್ದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಉಪ ವಿಭಾಗಗಳ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಮಾರಂಭದಲ್ಲಿ ಅಡಿಷನಲ್‌ ಎಸ್ಪಿ ಉದೇಶ್‌, ಡಿವೈಎಸ್ಪಿ ಶ್ರೀನಿವಾಸ್‌, ರಮೇಶ್‌ ಸೇರಿದಂತೆ ಜಿಲ್ಲೆಯ ಎಲ್ಲಾ ಉಪವಿಭಾಗಗಳ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!