ತುಮಕೂರು: ಸ್ಮಾರ್ಟ್‌ಸಿಟಿ, ಕೆಎಸ್‌ಆರ್‌ಟಿಸಿಯಿಂದ ನಿರ್ಮಿಸುತ್ತಿರುವ ಸುಸಜ್ಜಿತ ಬಸ್‌ನಿಲ್ದಾಣದ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರು ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುಂತೆ ಗುತ್ತಿಗೆದಾರರು ಹಾಗೂ ಇಂಜನಿಯರ್‌ಗಳಿಗೆ ಖಡಕ್ ಸೂಚನೆ ನೀಡಿದರು.
ನಗರದ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ, ಕಾಮಗಾರಿ ವಿಳಂಬವಾಗಿದ್ದು ನಿರೀಕ್ಷಿತ ವೇಗದಲ್ಲಿ ಕಾಮಗಾರಿ ನಡೆಯದೇ ಇರುವ ಬಗ್ಗೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಅವರು, ತಳಪಾಯದ ಹಂತದಲ್ಲಿ ನೀರು ಬರುತ್ತಿರುವುದರ ಬಗ್ಗೆ ಪರ್ಯಾಯ ಕಂಡುಕೊಳ್ಳಬೇಕು ಹಾಗೂ ತಡೆಗೋಡೆ ನಿರ್ಮಾಣ ಮಾಡುವಂತೆ ತಾಕೀತು ಮಾಡಿದರು.
ಕಾಮಗಾರಿಯ ಪ್ರಗತಿ ನಿರೀಕ್ಷಿತವಾಗಿಲ್ಲ, ಶೇ.33 ರಷ್ಟು ಪ್ರಗತಿ ಆಗಿದೆ ಅಷ್ಟೇ, ಕೊರೊನಾ ಕಾರಣದಿಂದ ವಿಳಂಬವಾಗಿದೆ ಆದರೆ ಮೂರನೇ ಅಲೆ ಬರುವ ಲಕ್ಷಣ ಇದ್ದರು ಸಹ ಕಾಮಗಾರಿ ಮುಗಿಯುತ್ತಿಲ್ಲ, ಕೊರೊನಾ ಸಂದರ್ಭದಲ್ಲಿಯೂ ಕಾರ್ಮಿಕರನ್ನು ಒಗ್ಗೂಡಿಸಿಕೊಂಡು ಕೆಲಸ ನಿರ್ವಹಿಸಿದರೆ ಮಾತ್ರ ಡಿಸೆಂಬರ್ ವೇಳೆಗೆ ಮೊದಲನೇ ಹಂತದ ಕಾಮಗಾರಿ ಮುಗಿಯಲಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಕಾಮಗಾರಿಯ ತಾಂತ್ರಿಕ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದ ಅವರು, ಕಾಮಗಾರಿ ವೀಕ್ಷಣೆಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ಭೇಟಿ ನೀಡುವುದಲ್ಲದೇ, ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ ಅವರು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಹಗಲು ರಾತ್ರಿ ಕಾರ್ಯನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಬಸ್ ಸ್ಟಾಂಡ್ ಕಾಮಗಾರಿ ವೀಕ್ಷಿಸಿದ ಕಳಸದ್
Get real time updates directly on you device, subscribe now.
Prev Post
Comments are closed.