ಕೊರಟಗೆರೆ: ಅನಾರೋಗ್ಯದಿಂದ ಕೆಲವು ವರ್ಷಗಳಿಂದ ಯಾವ ಆಸ್ಪತ್ರೆಯಲ್ಲಿಯೂ ಗುಣಮುಖವಾಗದ ಕಾರಣ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗಾ ಹೋಬಳಿ ತುಂಬಾಡಿ ಗ್ರಾಮ ಸತ್ಯನಾರಾಯಣ ಶೆಟ್ಟಿ ಪತ್ನಿ ತ್ರೈಜತಿ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ನಾನಾ ಆಸ್ಪತ್ರೆಗೆ ತಿರುಗಾಡಿ ಕಾಯಿಲೆ ವಾಸಿಯಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ, ಪಿಎಸ್‌ಐ ನಾಗರಾಜು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಿಳೆ ಆತ್ಮಹತ್ಯೆ
Get real time updates directly on you device, subscribe now.
Next Post
Comments are closed.