ಕೊರಟಗೆರೆ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪೋಷಕರು ಮಲಗಿದ ನಂತರ ರಾತ್ರಿ ವೇಳೆ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮದ ಚುರುಮುರಿ ವ್ಯಾಪಾರಿ ಹನುಮಂತಾಚಾರ್ ಮಗಳಾದ ಹೇಮಾವತಿ (17) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೇಮಾವತಿ ತನ್ನ ಮನೆಯ ಕೋಣೆಯಲ್ಲಿ ಓದಿಕೊಳ್ಳುವುದಾಗಿ ಹೋದವಳು ಬೆಳಗ್ಗೆ 8 ಗಂಟೆಯಾದರೂ ಬಾಗಿಲು ತೆಗೆಯದನ್ನ ಗಮನಿಸಿದ ಪೋಷಕರು ಬಾಗಿಲು ಮುರಿದು ನೋಡಿದಾಗ ಫ್ಯಾನ್ ಗೆ ತನ್ನ ವೆಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿನ ಬಗ್ಗೆ ಯಾವುದೇ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ, ಪಿಎಸ್‌ಐ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ
Get real time updates directly on you device, subscribe now.
Prev Post
Next Post
Comments are closed.