ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಕೋವಿಡ್‌ ಪರೀಕ್ಷೆ

493

Get real time updates directly on you device, subscribe now.

ಕೊರಟಗೆರೆ: ಪಟ್ಟಣದ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ ಮಾಡಲಾಯಿತು.
ಬಾಲಕಿಯರ ವಸತಿ ನಿಲಯದ ಪಕ್ಕದಲ್ಲಿರುವ ಸರ್ಕಾರಿ ಬಾಲಾಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕನಿಗೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದಾಗ ಶಾಲಾ ಮುಖ್ಯ ಶಿಕ್ಷಕರು ತಾವೇ ವೈದ್ಯರಿಗೆ ಕರೆ ಮಾಡಿ ತಿಳಿಸಿದರು.
ವೈದ್ಯರು ಪರೀಕ್ಷಿಸಿದಾಗ ಕೋವಿಡ್‌ ಧೃಡವಾದ ಹಿನ್ನೆಲೆ ಶಾಲೆಯ ವಿದ್ಯಾರ್ಥಿಗಳಿಗೂ ಕೋವಿಡ್‌ ಪರೀಕ್ಷೆ ಮಾಡಲಾಯಿತು. ಕೋವಿಡ್‌ ಪರೀಕ್ಷೆಯಲ್ಲಿ ಸುಮಾರು 22 ವಿದ್ಯಾರ್ಥಿಗಳು ಸೇರಿ ಒಟ್ಟು 23 ಮಂದಿಗೆ ಕೊರೊನಾ ದೃಢವಾಗಿತ್ತು.
ತದನಂತರ ತಹಶೀಲ್ದಾರ್‌ ನಹೀದಾ ಜಮ್‌ ಜಮ್‌ ಅವರು ಕೋವಿಡ್‌ ಬಂದಿರುವಂತಹ ವಿದ್ಯಾರ್ಥಿಗಳ ಪೋಷಕರಿಗೆ ತಮ್ಮ ತಮ್ಮ ಮಕ್ಕಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರುವಂತೆ ಮಾಡಿ ಅವರಿಗೆ ವೈದ್ಯರು ತಿಳಿಸಿರುವ ಔಷಧಿ ನೀಡಿ ಮತ್ತೆ ಕೋವಿಡ್‌ ಪರೀಕ್ಷೆ ಮಾಡಿಸದೆ ಇರುವಂತಹ ವಿದ್ಯಾರ್ಥಿಗಳು, ಶಿಕ್ಷಕರು, ಅಡುಗೆ ಸಿಬ್ಬಂದಿಗೆ ಕೋವಿಡ್‌ ಪರೀಕ್ಷೆ ಮಾಡಲು ಆರೋಗ್ಯ ಇಲಾಖೆಗೆ ತಿಳಿಸಿ ಶಾಲಾ ಆಡಳಿತಕ್ಕೆ ಜನವರಿ 8 ರಿಂದ ಒಂದು ವಾರ ರಜೆ ನೀಡುವಂತೆ ಸೂಚಿಸಿದ್ದರು.
ಈ ಕೋವಿಡ್‌ ಪ್ರಕರಣದಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಪಕ್ಕದಲ್ಲಿ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷಿಸಿದರು. ಕೋವಿಡ್‌ ಪರೀಕ್ಷೆಯಲ್ಲಿ 9 ವಿದ್ಯಾರ್ಥಿಗಳು, ಒಬ್ಬರು ಅಡುಗೆಯವರು ಸೇರಿ ಒಟ್ಟು 11 ಮಂದಿಗೆ ಶನಿವಾರ ಕೋವಿಡ್‌ ಧೃಢವಾಗಿತ್ತು.
ಇವರ ಸಂಪರ್ಕದಲ್ಲಿದ ಹಲವು ವಿದ್ಯಾರ್ಥಿಗಳು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್‌ ಪರೀಕ್ಷೆ ಮಾಡಿಸುವಂತೆ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದ ಸಿಬ್ಬಂದಿ ವರ್ಗ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಜಯ್‌ ಕುಮಾರ್‌, ವಡ್ಡಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಸಂಜಯ್‌, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎನ್‌.ಪದ್ಮಿನಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!