ಸಿಲಿಂಡರ್ ಸ್ಪೋಟ ಗುಡಿಸಲು ಭಸ್ಮ

213

Get real time updates directly on you device, subscribe now.

ಶಿರಾ: ಸಿಲಿಂಡರ್ ಸ್ಪೋಟಗೊಂಡು ಒಂದು ಗುಡಿಸಲು ಸಂಪೂರ್ಣವಾಗಿ ಭಸ್ಮಗೊಂಡು ಅಕ್ಕಪಕ್ಕದ ಎರಡು ಮನೆಗಳಿಗೆ ಹಾನಿಯಾಗಿರುವ ಘಟನೆ ತಾಲ್ಲೂಕಿನ ಕೊಟ್ಟ ಗ್ರಾಮದಲ್ಲಿ ಶನಿವಾರ ನಡೆದಿದೆ.
ಸಣ್ಣಮ್ಮ ಎಂಬುವರ ಗುಡಿಸಿಲಿನಲ್ಲಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದಲ್ಲಿದ್ದ ಪುಟ್ಟೀರಮ್ಮ ಎಂಬುವರ ಮನೆಯೂ ಸಂಪೂರ್ಣ ಸುಟ್ಟು ಹೋಗಿದೆ. ಮನೆಯಲ್ಲಿದ್ದ ದವಸ ಧಾನ್ಯ, ಬಟ್ಟೆ ಸೇರಿದಂತೆ ಎಲ್ಲವೂ ಸುಟ್ಟು ಹೋಗಿವೆ ಹಾಗೂ ಪಕ್ಕದ ಎರಡು ಮನೆಗಳಿಗೂ ಹಾನಿಯಾಗಿದೆ, ಅಗ್ನಿಶಾಮಕ ದಳದ ಸಿಬ್ಬಂದಿಯವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ತಹಶೀಲ್ದಾರ್ ಭೇಟಿ: ವಿಷಯ ತಿಳಿದ ತಕ್ಷಣ ತಹಶೀಲ್ದಾರ್ ಮಮತ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರಕಾರದಿಂದ ಬರುವ ಪರಿಹಾರವನ್ನು ಶೀಘ್ರ ದೊರಕುವಂತೆ ಮಾಡುವುದಾಗಿ ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!