ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾರತ ಗಣರಾಜ್ಯೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ರಾಷ್ಟ್ರ ಧ್ವಜಾರೋಹಣ ಮಾಡಿ ಗೌರವ ರಕ್ಷೆ ಸ್ವೀಕರಿಸುವರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಸೇರಿದಂತೆ ಸಂಸದರು, ಶಾಸಕರು, ಮತ್ತಿತರ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಗಣರಾಜ್ಯೋತ್ಸವಕ್ಕೆ ಸಕಲ ಸಿದ್ದತೆ
Get real time updates directly on you device, subscribe now.
Prev Post
Next Post
Comments are closed.