ತುಮಕೂರು: ಅನಿರೀಕ್ಷಿತವಾಗಿ ನನಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ದೊರಕಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸಂತಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ಜಿಲ್ಲೆಯನ್ನು ಎಲ್ಲಾ ರೀತಿಯಿಂದಲೂ ಅಭಿವೃದ್ಧಿಯತ್ತ ಕೊಂಡೊಯ್ಯಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಇತ್ತೀಚೆಗೆ ವರದಿಯಾದ ಬಂಧಿಖಾನೆಯಲ್ಲಿ ನಡೆದ ಅನಧಿಕೃತ ಚಟುವಟಿಕೆಗಳ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಪ್ಪಿತಸ್ಥರನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಮುಂಬಡ್ತಿ ನೀಡುವ ಸಂಬಂಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ, ರಾಜ್ಯದಲ್ಲಿ ಸುಮಾರು 200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್ ಠಾಣೆಗಳ ನಿರ್ಮಾಣ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಅನಿರೀಕ್ಷಿತವಾಗಿ ಉಸ್ತುವಾರಿ ಸಿಕ್ಕಿದೆ: ಸಚಿವ
Get real time updates directly on you device, subscribe now.
Prev Post
Comments are closed.