ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನ ಆಚರಣೆ

203

Get real time updates directly on you device, subscribe now.

ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಆಯೋಜಿಸಿದ್ದ 191ನೇ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ನಂತರ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅವರು ಹಳ್ಳಿಯಲ್ಲಿದ್ದರೂ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿಸಿದ ವೀರ ಎಂದು ಬಣ್ಣಿಸಿದರಲ್ಲದೆ, ಅವರ ಧೈರ್ಯ, ಶೌರ್ಯ, ವೀರತನವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್‌, ತಹಶೀಲ್ದಾರ್‌ ಮೋಹನ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!