ನಾನು ಯಾರಿಗೂ ಪ್ರತಿಸ್ಪರ್ಧಿಯಲ್ಲ: ಸಾಸಲು

365

Get real time updates directly on you device, subscribe now.

ಶಿರಾ: 2023ರ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ಶಿರಾ ಕ್ಷೇತ್ರದ ಸಂಚಾರ ಮಾಡಿ ಸಂಚಲನ ಮೂಡಿಸಿರುವ ಸಾಸಲು ಸತೀಶ್ ನಾನು ಯಾರಿಗೂ ಪ್ರತಿಸ್ಪರ್ಧಿಯಲ್ಲ ಹಾಗೂ ಯಾವುದೇ ಕಾರಣಕ್ಕೂ ಹಿರಿಯ ನಾಯಕರನ್ನು ಕಡೆಗಣಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಸಚಿವ ಟಿಬಿ ಜಯಚಂದ್ರ ಅವರು ತಮ್ಮ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ, ಅವರ ಬಗ್ಗೆ ನನಗೆ ಅಪಾರ ಗೌರವವೂ ಇದೆ, ಆದರೆ ಕಳೆದ ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಟಿ.ಬಿ.ಜಯಚಂದ್ರ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಎಐಸಿಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ರಾಜ್ಯ ನಾಯಕರ ಮೇಲೆ ಕೆಂಗಣ್ಣು ಬೀರಿ ಯುವಕರಿಗೆ ಆದ್ಯತೆ ನೀಡಿ ಎಂದು ಸೂಚಿಸಿದ್ದರು, ಅದರಂತೆ ನಾನು ರಾಜ್ಯ ಹಾಗೂ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿ ನಂತರ ಶಿರಾ ಕ್ಷೇತ್ರದಲ್ಲಿ ಸಂಘಟನೆಗೆ ಮುಂದಾಗಿದ್ದೇನೆ ಎಂದು ತಿಳಿಸಿದ್ದಾರೆ.
ಶಿರಾ ಕ್ಷೇತ್ರದಲ್ಲಿ ಒಂದುವರೇ ಲಕ್ಷ ಅಹಿಂದ ಮತಗಳಿವೆ, ಹಾಗೆ ಅಲ್ಪ ಸಂಖ್ಯಾತರ ಬೆಂಬಲ ಇರುವುದರಿಂದ ಈ ಭಾಗದಲ್ಲಿ ಓರ್ವ ಗೊಲ್ಲ ಸಮುದಾಯ ವ್ಯಕ್ತಿಗೆ ಅವಕಾಶ ಮಾಡಿಕೊಡ್ತಾರೆ ಎಂಬ ಭರವಸೆ ಮೇಲೆ ಕ್ಷೇತ್ರ ಸಂಚಾರದಲ್ಲಿ ತೊಡಗಿದ್ದೇನೆ ಎಂದು ತಿಳಿಸಿದ್ದಾರೆ.
ಮುಂದಿನ 2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ, ಜಿಲ್ಲೆಯಲ್ಲಿ ತಿಪಟೂರು, ತುಮಕೂರು, ಶಿರಾ, ಮಧುಗಿರಿಯಲ್ಲಿ ಕಾಂಗ್ರೆಸ್ ಪರ ಹೆಚ್ಚು ಒಲವು ವ್ಯಕ್ತವಾಗುತ್ತಿದೆ, ಹೀಗಾಗಿ 7 ರಿಂದ 8 ಸ್ಥಾನ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ, ರಾಜ್ಯ ನಾಯಕರ ಆಶೀರ್ವಾದ ನನಗಿದ್ದೂ ಒಂದು ವೇಳೆ ಶಿರಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಿದರೂ ನಾನು ಚುನಾವಣೆ ನಡೆಸುತ್ತೇನೆ, ಶಿರಾದಲ್ಲಿ ಬಹುತೇಕ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಾಸಲು ಭವಿಷ್ಯ ನುಡಿದಿದ್ದಾರೆ.

Get real time updates directly on you device, subscribe now.

Comments are closed.

error: Content is protected !!