ಯುವಕರು ರಾಜಕೀಯದತ್ತ ಧಾವಿಸಲಿ: ರಾಜೇಂದ್ರ

436

Get real time updates directly on you device, subscribe now.

ಮಧುಗಿರಿ: ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.

ಪಟ್ಟಣದ ಎಂಎನ್‌ಕೆ ಸಮುದಾಯ ಭವನದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಿಜಿಟಲ್‌ ಸದಸ್ಯತ್ವ ನೋಂದಣಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಇಂದು ಮಾಹಿತಿ ತಂತ್ರಜ್ಞಾನ ಪ್ರಗತಿಯಲ್ಲಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಮಾಹಿತಿ ತಕ್ಷಣ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಡಿಜಿಟಲ್‌ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ, ಜಿಲ್ಲೆಯಲ್ಲಿಯೇ ಪ್ರಥಮವಾಗಿ ಮಧುಗಿರಿಯಲ್ಲಿ ಪ್ರಾರಂಭಿಸಲಾಗಿದ್ದು, 252 ಬೂತ್‌ಗಳಿಂದ 70 ಸಾವಿರ ಸದಸ್ಯರನ್ನು ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದರು.
ಬಿಜೆಪಿ ಪಕ್ಷದ ಜನ ವಿರೋಧಿ ನೀತಿಯಿಂದಾಗಿ ರಾಜ್ಯದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಆಶೀರ್ವದಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಕೆ.ಎನ್‌.ರಾಜಣ್ಣ ಸಚಿವರಾಗಲಿದ್ದಾರೆ ಎಂದ ಅವರು ನನ್ನನ್ನು ವಿಧಾನಪರಿಷತ್‌ ಸದಸ್ಯನನ್ನಾಗಿ ಮಾಡಲು ಕ್ಷೇತ್ರದ ಎಲ್ಲಾ ಮುಖಂಡರು ಕಾರ್ಯಕರ್ತರು ಶ್ರಮಿಸಿದ್ದು, ನಾನು ಅವರೆಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು.
ಹಿಜಾಬ್‌ ವಿಚಾರದಲ್ಲಿ ಬಿಜೆಪಿ ಪಕ್ಷದವರು ಯುವ ಜನತೆಯನ್ನು ಪ್ರಚೋಧಿಸಿ ದಿಕ್ಕು ತಪ್ಪಿಸುತ್ತಿದ್ದಾರೆ, ಇದಕ್ಕೆಲ್ಲಾ ವಿದ್ಯಾರ್ಥಿಗಳು ಆಸ್ಪದ ನೀಡದೆ ಓದಿನತ್ತ ಗಮನ ನೀಡಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪಾವಗಡ ಜಿಪಂ ಮಾಜಿ ಸದಸ್ಯ ಹೆಚ್‌.ವಿ.ವೆಂಕಟೇಶ್‌ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಾಯಿಸುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಲು ನಾವೆಲ್ಲರೂ ಕೈ ಜೋಡಿಸಬೇಕು ಎಂದರು.
ಡಿಜಿಟಲ್‌ ಸದಸ್ಯತ್ವ ನೋಂದಣಿ ಸಮಿತಿ ಸಂಚಾಲಕ ಅನಿಲ್‌ ಹಾಗೂ ಮಧುಗಿರಿ ಉಸ್ತುವಾರಿ ಶ್ರೀನಾಥ್‌ ಕಾರ್ಯಾಗಾರದ ಬಗ್ಗೆ ಮಾಹಿತಿ ನೀಡಿದರು.
ಜಿಪಂ ಮಾಜಿ ಸದಸ್ಯ ಜಿ.ಜೆ.ರಾಜಣ್ಣ, ರಾಜ್ಯ ಸಹಕಾರ ಮಹಾ ಮಂಡಲದ ಮಾಜಿ ಅಧ್ಯಕ್ಷ ಎನ್‌.ಗಂಗಣ್ಣ, ಪುರಸಭಾ ಅಧ್ಯಕ್ಷ ತಿಮ್ಮರಾಜು, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಸ್‌.ಮಲ್ಲಿಕಾರ್ಜುನಯ್ಯ, ಮುಖಂಡರಾದ ಎಂ.ಕೆ.ನಂಜುಂಡಯ್ಯ, ಬಿ.ನಾಗೇಶ್‌ ಬಾಬು, ಎಂ.ಎಸ್‌.ಶಂಕರನಾರಾಯಣ್‌, ಸುದೇಶ್‌ ಬಾಬು, ಎಂ.ಎಸ್‌.ಚಂದ್ರಶೇಖರ್‌ ಮುಂತಾದವರು ಇದ್ದರು.

Get real time updates directly on you device, subscribe now.

Comments are closed.

error: Content is protected !!