ಕೊಡಿಗೇನಹಳ್ಳಿ: ಜಿಂಕೆ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಅರಣ್ಯಾಧಿಕಾರಿಗಳನ್ನು ಕಂಡು ಪರಾರಿಯಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ ತಿಪ್ಪಾಪುರ ಗ್ರಾಮದಲ್ಲಿ ಗಂಡು ಜಿಂಕೆಯೊಂದನ್ನು ಬೇಟೆಯಾಡಿದ್ದು ಸುಮಾರು 5 ಕೆಜಿ ಜಿಂಕೆ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಅರಣ್ಯಾಧಿಕಾರಿಗಳನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ನಂತರ ಸ್ಥಳದಲ್ಲಿದ್ದ ದ್ವಿಚಕ್ರ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬ್ರಹ್ಮದೇವರಹಳ್ಳಿಯ ಶಿವಕುಮಾರ, ಚಿನ್ನೇನಹಳ್ಳಿ ಗ್ರಾಮದ ಆದರ್ಶ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಎ3 ಆರೋಪಿ ರಾಕೇಶ್ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಜಿಂಕೆ ಮಾಂಸ ಮಾರಾಟ- ಆರೋಪಿಗಳ ಬಂಧನ
Get real time updates directly on you device, subscribe now.
Comments are closed.