ತುರುವೇಕೆರೆ: ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸರ್ಕಾರಿ ಇಲಾಖೆ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿದ ತುರುವೇಕೆರೆ ಪೋಲೀಸರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಬಂಧಿತ ವ್ಯಕ್ತಿ ಮಲ್ಲಿಕಾರ್ಜುನ್ ತಾಲೂಕಿನ ಲೋಕಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ.
ಪಟ್ಟಣದಲ್ಲಿ ಅನಗತ್ಯವಾಗಿ ಕಾರಿನಲ್ಲಿ ಓಡಾಟ ನೆಡೆಸುತ್ತಿರುವ ಬಗ್ಗೆ ಪ್ರಶ್ನಿಸಿದ ಗೃಹ ರಕ್ಷಕ ಸಿಬ್ಬಂದಿ ಹಾಗೂ ಕಂದಾಯ ಇಲಾಖಾ ಸಿಬ್ಬಂದಿಯನ್ನು ನಿಂದಿಸಿ ಬೆದರಿಕೆ ಹಾಕಿದ್ದ . ಈ ಹಿನ್ನಲೆಯಲ್ಲಿ ಅತನ ವಿರುದ್ದ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅರೋಪದಡಿ ಪ್ರಕರಣ ದಾಖಲಿಸಿ. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸದ್ಯ ಅರೋಪಿ ನ್ಯಾಯಾಂಗ ಬಂಧನ ಆನುಭವಿಸುವಂತಾಗಿದೆ.
Comments are closed.