ಸಚಿವ ಈಶ್ವರಪ್ಪ ಹೇಳಿಕೆಗೆ ಆಕ್ರೋಶ

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ- ಕಾಂಗ್ರೆಸ್‌ ಕಾರ್ಯಕರ್ತರು ಅರೆಸ್ಟ್

112

Get real time updates directly on you device, subscribe now.

ತುಮಕೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವ ಧ್ವಜವನ್ನ ಕೆಂಪುಕೋಟೆ ಮೇಲೆ ಹಾರಿಸಲಾಗುವುದು ಎಂಬ ವಿವಾದಾತ್ಮಕ ಹೇಳಿಕೆ ಖಂಡಿಸಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ನಗರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಮುತ್ತಿಗೆ ಹಾಕಲು ಮುಂದಾದ ಹಿನ್ನಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್‌ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಪ್ರತಿಭಟನೆಯ ಅನುಮತಿ ಪಡೆಯದ ಕಾರ್ಯಕರ್ತರನ್ನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕದಂತೆ ಶಿವಕುಮಾರ ಸ್ವಾಮೀಜಿ ವೃತ್ತದ ಬಳಿಯೇ ತಡೆದರು.
ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ, ಹರಕು ನಾಲಗೆ ಈಶ್ವರಪ್ಪ ಒಬ್ಬ ರಾಜ್ಯದ ಹುಚ್ಚ ಮಂತ್ರಿಯಾಗಿದ್ದಾರೆ, ಧ್ವಜ ಪರಿವರ್ತನೆ ಮಾಡಿ ಕೆಂಪು ಕೋಟೆಯ ಮೇಲೆ ಹಾರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಂವಿಧಾನವನ್ನು ಅವಮಾನಿಸುವ ನೀಚ ಕೃತ್ಯ ಮಾಡಿದ್ದಾರೆ, ಇದು ಖಂಡನೀಯ, ಕೂಡಲೇ ಇಂತಹ ದೇಶದೋಹ ಹೇಳಿಕೆ ನೀಡಿರುವ ಮಂತ್ರಿಯನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಒತ್ತಾಯಿಸಿದರು.
ಕೆ.ಎಸ್‌.ಈಶ್ವರಪ್ಪ ಅವರ ಭಾವಚಿತ್ರವುಳ್ಳ ಬ್ಯಾನರ್‌ ಹಿಡಿದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪಕ್ಷದ ವಿರುದ್ಧ ಧಿಕ್ಕಾರ, ಹುಚ್ಚ ಮಂತ್ರಿಗೆ ಧಿಕ್ಕಾರ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುವ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದರು.

ಕಾಂಗ್ರೆಸ್‌ ವಿರುದ್ಧ ಕಿಡಿ
ಈ ವೇಳೆ ನಗರ ಬಿಜೆಪಿ ಜಿಲ್ಲಾಧ್ಯಕ್ಷ ಲಕ್ಷ್ಮೀಶ ಪ್ರತಿಕ್ರಿಯಿಸಿ ಕಾಂಗ್ರೆಸ್‌ ಅವರಿಗೆ ನಮ್ಮ ಸಚಿವ ಕೆ.ಎಸ್‌ ಈಶ್ವರಪ್ಪ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕನ್ನು ಹೊಂದಿಲ್ಲ, ರಾಜ್ಯದಲ್ಲಿ ಅಲ್ಪ ಸ್ವಲ್ಪ ಸಂಘಟನಾ ಜೀವ ಉಳಿಸಿಕೊಂಡಿರುವ ಕಾಂಗ್ರೆಸ್ಸಿಗರಿಗೆ ಇಂತಹ ವಿಚಾರಗಳನ್ನು ದೊಡ್ಡ ಮಟ್ಟದಲ್ಲಿ ಚರ್ಚಿಸುತ್ತ ದೊಡ್ಡವರಾಗಲು ಹೊರಟಿದ್ದಾರೆ, ಇವರನ್ನು ಒಪ್ಪಿಕೊಳ್ಳಲು ನಾವೇನು ದಡ್ಡರಲ್ಲ ಎಂದು ಛೇಡಿಸಿದರು.

Get real time updates directly on you device, subscribe now.

Comments are closed.

error: Content is protected !!