ಕೊರಟಗೆರೆ: ವೈಯಕ್ತಿಕ ಸಾಲಕ್ಕೆ ಹೆದರಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಸಿ.ಎನ್.ದುರ್ಗಾ ಗ್ರಾಮದ ನರಸಿಂಹಯ್ಯನ ಮಗನಾದ ಚಿನ್ನರಾಜು (43) ವರ್ಷದ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ವೈಯಕ್ತಿಕವಾಗಿ ಸಾಲ ಮಾಡಿದ ಹಣ ತೀರಿಸಲಾಗದೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಪಿಎಸ್‌ಐ ನಾಗರಾಜು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಸಾಲ ತೀರಿಸಲಾಗದೆ ವ್ಯಕ್ತಿ ಆತ್ಮಹತ್ಯೆ
Get real time updates directly on you device, subscribe now.
Prev Post
Next Post
Comments are closed.