ಫಲಾನುಭವಿಗಳ ಮನೆಗೆ ಸರ್ಕಾರಿ ಸೌಲಭ್ಯ

ಬಿಜೆಪಿ ಸರ್ಕಾರ ಜನಪರ ಕಾರ್ಯಕ್ರಮ ಮಾಡ್ತಿದೆ: ರಾಜೇಶ್ ಗೌಡ

198

Get real time updates directly on you device, subscribe now.

ಶಿರಾ: ಸಂದ್ಯಾ ಸುರಕ್ಷಾ ಅಂಗವಿಕಲ ಮತ್ತು ವಿಧವಾ ವೇತನ ಸೇರಿದಂತೆ ಸರ್ಕಾರದ ಇತರೆ ಸವಲತ್ತುಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಜನಸಾಮಾನ್ಯರಿಗೆ ಹೆಚ್ಚು ಅನುಕೂಲಕರವಾಗಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

ಶಿರಾ ತಾಲೂಕು ಗೌಡಗೆರೆ ಹೋಬಳಿಯ ಡ್ಯಾಗೇರಹಳ್ಳಿಯಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಂದಾಯ ಇಲಾಖೆಯ ದಾಖಲಾತಿಗಳನ್ನು ನೇರವಾಗಿ ತಲುಪಿಸುವ ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳಲ್ಲಿ ಮುಖ್ಯವಾದದ್ದಾಗಿದೆ, ಕಂದಾಯ ಸಚಿವ ಆರ್‌.ಅಶೋಕ್‌ ದೂರದೃಷ್ಟಿಯೊಂದಿಗೆ ಈ ಕಾರ್ಯಕ್ರಮ ರೂಪಿಸಿದ್ದು ಗ್ರಾಮಸ್ಥರಿಗೆ ತಮ್ಮ ಹಳ್ಳಿಗಳಲ್ಲೇ ಹಲವಾರು ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕುವಂತೆ ಆಗಿದೆ, ನಿತ್ಯ ದೂರದ ಊರುಗಳಿಂದ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕೇಂದ್ರಕ್ಕೆ ಅಲೆಯುವುದು ತಪ್ಪುತ್ತದೆ, ಶಿರಾ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸುವ ನಮ್ಮ ಪ್ರಯತ್ನ ಮದಲೂರು ಕೆರೆಗೆ ಹೇಮಾವತಿ ನೀರು ಹರಿಯು ಮೂಲಕ ಯಶಸ್ಸು ಕಂಡಿದ್ದು ಶಿರಾ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಸುಧಾರಣೆ ಕಂಡಿದೆ ಎಂದರು
ವಿಧಾನಪರಿಷತ್‌ ಸದಸ್ಯ ಚಿದಾನಂದ ಎಂ. ಗೌಡ ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಜನ ಸಾಮಾನ್ಯರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹೆಚ್ಚು ಅನುಕೂಲಕರವಾಗಿದೆ, ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿದ್ದು ರೈತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ತಿಳಿಸಿದರು.
ತೆಂಗು ಮತ್ತು ನಾರು ನಿಗಮ ಹಾಗೂ ಮಧುಗಿರಿ ವಲಯ ಜಿಲ್ಲೆ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ ಮಾತನಾಡಿ, ಗೌಡಗೆರೆ ಹೋಬಳಿಯ ಗಡಿ ಗ್ರಾಮಗಳ ಕೆರೆಗಳಿಗೆ ನೀರು ಹರಿಸುವ ನಿಟ್ಟಿನಲ್ಲಿ ಗಾಯತ್ರಿ ಜಲಾಶಯದಿಂದ ಹುಣಸೇಹಳ್ಳಿ ಪಂಚಾಯತಿ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲು ಕ್ರಿಯಾ ಯೋಜನೆ ರೂಪಿಸಿರುವುದು ಮುಂಬರುವ ದಿನಗಳಲ್ಲಿ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.
ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್‌.ಆರ್‌.ಗೌಡ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಾವತಿ ಖಾತೆ ತಕ್ಷಣ ವಿಲೇವಾರಿ ಮಾಡಬೇಕು ಕಂದಾಯಾಧಿಕಾರಿಗಳು ಅನಗತ್ಯವಾಗಿ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಕೆಲಸ ಮಾಡಬಾರದು ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಮಮತಾ, ಕಾಡುಗೊಲ್ಲ ಮುಖಂಡ ಚಂಗಾವರ ಮಾರಣ್ಣ, ಹುಣಸೇಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹನುಮಂತರಾಯಪ್ಪ, ಉಪಾಧ್ಯಕ್ಷ ರೇಖಾ ತಿಪ್ಪೇಸ್ವಾಮಿ, ವಿಎಸ್‌ಎಸ್‌ಎನ್‌ ಅಧ್ಯಕ್ಷ ಶಶಿಧರ್‌, ಮಾಜಿ ಅಧ್ಯಕ್ಷ ಗೋವಿಂದರೆಡ್ಡಿ, ಲಕ್ಕೇಗೌಡ, ಹನುಮಂತರಾಯಪ್ಪ, ದೊಡ್ಡೆಗೌಡ, ಹುಣಸೇಹಳ್ಳಿ ಗ್ರಾಮ ಪಂಚಾಯ್ತಿಯ ಸರ್ವ ಸದಸ್ಯರು ಹಾಗೂ ಕೃಷಿ ಸಹಾಯಕ ನಿರ್ದೇಶಕ ರಂಗನಾಥ್‌, ಇಓ ಅನಂತರಾಜು, ಡಾ.ರಮೇಶ್‌, ಗ್ರೇಡ್‌-2 ತಹಸೀಲ್ದಾರ್‌ ಮಂಜುನಾಥ್‌, ಉಪ ತಹಸೀಲ್ದಾರ್‌ ಸುನಿಲ್ ಕುಮಾರ್‌, ಕಂದಾಯ ವೃತ್ತ ನಿರೀಕ್ಷಕ ವೈ.ಬಿ.ಕಾಂತಪ್ಪ , ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ, ಸಿಡಿಪಿಓ ಕೆಂಪಯ್ಯ, ಸುಜಾತ, ನಾಗರಾಜು ಸೇರಿದಂತೆ ವಿವಿಧ ವೃತ್ತಗಳ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವಿವಿಧ ಯೋಜನೆಗಳಲ್ಲಿ ಸವಲತ್ತು ಪಡೆಯಲು ಅರ್ಹರಾದ 50 ಜನ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಮಂಜೂರಾತಿ ಪತ್ರ ವಿತರಣೆ ಮಾಡಿದರು.

Get real time updates directly on you device, subscribe now.

Comments are closed.

error: Content is protected !!