ತುಮಕೂರು: ತುಮಕೂರು ತಾಲ್ಲೂಕಿನಲ್ಲಿ ಫೆ.27 ರಿಂದ ಮಾ.2ರ ವರೆಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ 0-5 ವರ್ಷದೊಳಗಿನ 52,761 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್ ತಿಳಿಸಿದರು.
ಪಾಲಿಕೆ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲ್ಲೂಕಿನಲ್ಲಿ 0-5 ವರ್ಷದೊಳಗಿನ 52,761 ಮಕ್ಕಳಿಗೆ ಲಸಿಕೆ ಹಾಕಲು 242 ಲಸಿಕಾ ಕೇಂದ್ರ ತೆರೆಯಲಾಗುವುದು, ಅಲ್ಲದೆ, 27 ಟ್ರಾನ್ಸಿಟ್ ಮತ್ತು 1 ಮೊಬೈಲ್ ಲಸಿಕಾ ಕೇಂದ್ರ ಬಳಸಿಕೊಳ್ಳಲಾಗುವುದು, ಲಸಿಕೆ ನೀಡಲು 1,024 ಆರೋಗ್ಯ ಸಿಬ್ಬಂದಿ ಹಾಗೂ 54 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸಲು ಲಸಿಕಾ ದಿನವಾದ ಸಹ ಶಾಲೆಗಳನ್ನು ತೆರೆದು ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಏರ್ಪಡಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದರಲ್ಲದೆ ಅಂಗನವಾಡಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಬೇಕಲ್ಲದೆ, ಮನೆ- ಮನೆಗೆ ಭೇಟಿ ನೀಡಿ ಐಇಸಿ ಕರಪತ್ರ, ಭಿತ್ತಿಪತ್ರ ವಿತರಿಸಿ ಅರಿವು ಮೂಡಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ಪಾಲಿಕೆಯ ಉಪ ಆಯುಕ್ತ ಗಿರೀಶ್ ಹಾಗೂ ಆರೋಗ್ಯಾಧಿಕಾರಿ ಡಾ.ರಕ್ಷಿತ್, ತಾಲ್ಲೂಕು ಕಚೇರಿಯ ಶಿರಸ್ತೇದಾರ್ ನೀಲಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
52,761 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ
Get real time updates directly on you device, subscribe now.
Comments are closed.