ಹುಳಿಯಾರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 9 ಕೋಟಿ ರೂ. ಗು ಅಧಿಕ ವೆಚ್ಚದ ವಿವಿಧ ರಸ್ತೆ ಕಾಮಗಾರಿ, ವಿದ್ಯುತ್ ಉಪಸ್ಥಾವರ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ಕಾನೂನು ಸಂಸದೀಯ ವ್ಯವಹಾರ ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ನೆರವೇರಿಸಿದರು.
ಹುಳಿಯಾರು ಹೋಬಳಿ ದಸೂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಪ್ಪನಹಟ್ಟಿ, ಎಮ್ಮೆ ಕರ್ಕಿಹಟ್ಟಿ, ಮುಳ್ಳಯ್ಯನಹಟ್ಟಿ, ಎಳೆಗೊಲ್ಲರಹಟ್ಟಿ, ಕರೆಬಲ್ಲಪ್ಪನಹಟ್ಟಿಯಲ್ಲಿ ತಲಾ 10 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಾರ ಗೊಲ್ಲರಹಟ್ಟಿಯಲ್ಲಿ 10 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಬೆಳ್ಳಾರದಲ್ಲಿ ನೂತನ ಶಾಲಾ ಕೊಠಡಿಯ ಉದ್ಘಾಟನೆ ನೆರವೇರಿಸಿದರು.
ಹಂದನಕೆರೆ ಹೋಬಳಿ ಬೆಳಗುಲಿಯಲ್ಲಿ 8.85 ಕೋಟಿ ರೂ ವೆಚ್ಚದ 110 /11 ಕೆವಿ ಸಾಮರ್ಥ್ಯದ ವಿದ್ಯುತ್ ಉಪಸ್ಥಾವರ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಿರಂಜನ್ ಮೂರ್ತಿ, ಜಿಲ್ಲಾ ಉಪಾಧ್ಯಕ್ಷ ಕೇಶವ ಮೂರ್ತಿ, ಮುಖಂಡರಾದ ಬರಕನಹಾಳ್ ವಿಶ್ವನಾಥ್, ನವೀನ್ ಕೆಂಕೆರೆ, ಕೆಪಿಟಿಸಿಎಲ್ ಮುಖ್ಯ ಇಂಜಿನಿಯರ್, ಬೆಸ್ಕಾಂ ಮುಖ್ಯ ಇಂಜಿನಿಯರ್, ಕಾರ್ಯಕರ್ತರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.
ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ
Get real time updates directly on you device, subscribe now.
Next Post
Comments are closed.