ಯುವ ಜನತೆ ಮಾದಕ ವ್ಯಸನದಿಂದ ದೂರವಿರಲಿ

100

Get real time updates directly on you device, subscribe now.

ತುಮಕೂರು: ದೇಶದ ಯುವ ಜನತೆ ಮಾದಕ ವಸ್ತುಗಳ ಸಹವಾಸದಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪೋಲಿಸ್‌ ಇಲಾಖೆ ಹಾಗೂ ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ವಿರುದ್ಧ ಜಿಲ್ಲಾ ಮಟ್ಟದ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಂತಹ ಕಾನೂನು ಬಾಹಿರ ಚಟುವಟಿಕೆ ಹತ್ತಿಕ್ಕಲು ಪೊಲೀಸ್‌ ಇಲಾಖೆ ಬಹಳವಾಗಿ ಶ್ರಮಿಸುತ್ತಿದ್ದು, ಯುವ ಜನಾಂಗದ ಸಹಕಾರ ಅತ್ಯಗತ್ಯವಾಗಿದೆ ಎಂದರು.
ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್‌.ಬಿ.ಪ್ರದೀಪ್‌ ಕುಮಾರ್‌ ಮಾತನಾಡಿ, ಇಂದಿನ ಯುವ ಪೀಳಿಗೆಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಅತ್ಯವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಯಲ್ಲಿಯೇ ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿರುವುದು ಅಭಿನಂದಾರ್ಹ, ಮಾದಕ ವಸ್ತುಗಳ ನಿರ್ಮೂಲನೆಯಂತಹ ಉತ್ತಮ ಕಾರ್ಯಗಳಲ್ಲಿ ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಕಾರ ಎಂದೆಂದಿಗೂ ಜಿಲ್ಲಾಡಳಿತ ಹಾಗು ಪೊಲೀಸ್‌ ಇಲಾಖೆಯ ಜೊತೆ ಇರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರು ಮತ್ತು ಅಧ್ಯಕ್ಷ, ಶಿಕ್ಷಣ ಭೀಷ್ಮ ಕೆ.ಬಿ.ಜಯಣ್ಣ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತುಮಕೂರು ಲೋಕಸಭಾ ಸದಸ್ಯ ಜಿ.ಎಸ್‌.ಬಸವರಾಜ್‌, ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌, ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌, ಜಿಲ್ಲಾ ಪೊಲೀಸ್‌, ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌ ಶಹಾಪುರವಾಡ್‌, ವಿಧಾನ ಪರಿಷತ್‌ ಸದಸ್ಯ ಚಿದಾನಂದ ಗೌಡ ಇದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕಿರಣ್‌ ಕುಮಾರ್‌ ಪ್ರಾಸ್ತಾವಿಕವಾಗಿ ನುಡಿಗಳನ್ನಾಡಿದರು. ಪ್ರಾಂಶುಪಾಲ ಕೆ.ಪಿ.ನವೀನ್‌ ಕುಮಾರ್‌, ಸಂಯೋಜಕ ಸಿದ್ದೇಶ್ವರ ಸ್ವಾಮಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಅಮೂಲ್ಯ, ಉಪನ್ಯಾಸಕ ರಾಜೀವ್‌, ಉಪನ್ಯಾಸಕಿ ಆರತಿ, ಉಪ ಪ್ರಾಂಶುಪಾಲ ಪ್ರಶಾಂತ್‌ ಕುಮಾರ್‌ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!