ತುಮಕೂರು: ಜಿಲ್ಲೆಯ ಜನರಲ್ಲಿ ಕೊರೊನಾ ಸೋಂಕಿನ ಭೀತಿ ದಿನದಿಂದ ದಿನಕ್ಕೆ ತಗ್ಗುತ್ತಿದೆ. ವಿದೇಶದಿಂದ ಬಂದ ಒಟ್ಟು 480 ಮಂದಿಯಲ್ಲಿ 303 ಜನರನ್ನು ಮನೆಯಲ್ಲಿಯೇ ನಿಗಾದಲ್ಲಿ ಇರಿಸಲಾಗಿದೆ.
92 ಮಂದಿಯನ್ನು ಜಿಲ್ಲಾ ಆಸ್ಪತ್ರೆಯ ಐಸೊಲೇಷನ್ ಘಟಕದಲ್ಲಿ ಇಡಲಾಗಿದೆ. ಇಲ್ಲಿಯವರೆಗೆ 140 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಲಾಗಿತ್ತು. ಇವರಲ್ಲಿ 135 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೂರು ಮಾದರಿಗಳು ತಿರಸ್ಕೃತವಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ ತಿಳಿಸಿದ್ದಾರೆ.
ಹೀಗಿದ್ದರೂ ಮುನ್ನೆಚ್ಚರಿಕೆಯ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಜನರು ಮನೆಯಿಂದ ಹೊರಬರದಂತೆ ಮನವಿ ಮಾಡುತ್ತಿದೆ.
Comments are closed.