ಹಣ್ಣು ಮಾರಾಟಕ್ಕೆ ನೋಡಲ್ ಅಧಿಕಾರಿಗಳ ನೇಮಕ: ಡೀಸಿ

126

Get real time updates directly on you device, subscribe now.

ತುಮಕೂರು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ ಕುಮಾರ್
ಶಿರಾ: ಹಣ್ಣು ಹಂಪಲು ಮೊದಲಾದ ತೋಟಗಾರಿಕೆ ಬೆಳೆ ಬೆಳೆದ ರೈತರ ನೆರವಿಗೆ ಜಿಲ್ಲಾಡಳಿತ ಧಾವಿಸಲು ಸಿದ್ಧವಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕಗೊಳಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ವೀಡಿಯೋ ಒಂದನ್ನು ಬಿಡುಗಡೆ ಮಾಡಿರುವ ಅವರು, ನಗರಗಳ ಬಡಾವಣೆಗಳಲ್ಲಿ ಹಾಪ್‌ಕಾಮ್‌ಸ್‌ ಮೂಲಕ ತರಕಾರಿ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದೇ ಮಾದರಿಯಲ್ಲಿ ಕರ್ಬೂಜ, ಕಲ್ಲಂಗಡಿ, ಪಪ್ಪಾಯ ಮತ್ತಿತರೆ ತೋಟಗಾರಿಕೆ ಬೆಳೆ ಬೆಳೆದ ರೈತರು ದೃತಿಗೆಡುವ ಅವಕಾಶವಿಲ್ಲ, ಅವರಿಗೆ ಸ್ಥಳೀಯ ವ್ಯಾಪಾರಸ್ಥರ ಜೊತೆಯಲ್ಲಿ ಸಂಪರ್ಕ ಏರ್ಪಡಿಸುವ ಮೂಲಕ ಮತ್ತು ಹಾಪ್‌ಕಾಮ್‌ಸ್‌ ಮೂಲಕ ಬೆಳೆ ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು. ಇದಕ್ಕಾಗಿ ತೋಟಗಾರಿಕೆ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಬೆಳೆದ ಕರ್ಬೂಜ, ಕಲ್ಲಂಗಡಿ, ಪಪ್ಪಾಯ ಮೊದಲಾದ ಬೆಳೆಗಳು ಬಿಕರಿಯಾಗದೆ ಹೊಲದಲ್ಲೇ ಕೊಳೆಯುವ ಸ್ಥಿತಿ ತಲುಪುತ್ತಿರುವ ಬಗ್ಗೆ ತುಮಕೂರುವಾರ್ತೆ ಪತ್ರಿಕೆ ಸಚಿತ್ರ ವರದಿ ಮಾಡಿತ್ತು. ನಂತರ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರೈತರ ನೆರವಿಗೆ ಬರುವುದಾಗಿ ಘೋಷಿಸಿದೆ.

Get real time updates directly on you device, subscribe now.

Comments are closed.

error: Content is protected !!