ರೈತರು ಗಂಗಾ ಕಲ್ಯಾಣ ಯೋಜನೆ ಬಳಸಿಕೊಳ್ಳಲಿ

345

Get real time updates directly on you device, subscribe now.

ಶಿರಾ: ರಾಜ್ಯ ಸರಕಾರದಿಂದ ನೀಡುವ ಗಂಗಾ ಕಲ್ಯಾಣ ಯೋಜನೆ ರೈತರಿಗೆ ವರದಾನವಾಗಿದ್ದು, ಸರಕಾರದಿಂದಲೇ ಉಚಿತವಾಗಿ ಕೊಳವೆಬಾವಿ ಕೊರೆಸಿ ರೈತರ ವ್ಯವಸಾಯಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ, ರೈತರು ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಇಳುವರಿ ಪಡೆಯಿರಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.

ನಗರದ ಶ್ರೀವಿವೇಕಾನಂದ ಕ್ರೀಡಾಂಗಣದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ ಮತ್ತು ತಾಂಡಾ ಅಭಿವೃದ್ಧಿ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಮೋಟಾರ್ ಪಂಪ್ ಸೆಟ್ ವಿತರಿಸಿ ಮಾತನಾಡಿ, ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಂತಹ ಕೊಳವೆ ಬಾವಿಗಳಿಗೆ ೨೦೧೮- ೧೯ನೇ ಸಾಲಿನಿಂದಲೂ ಪಂಪು ಮೋಟಾರ್ ನೀಡಿರಲಿಲ್ಲ, ಈ ಬಗ್ಗೆ ಸದನದಲ್ಲಿ ಸಮಾಜ ಕಲ್ಯಾಣ ಸಚಿವ ಕೊಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದೆ, ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ಕೊಟ್ಟಿದ್ದರು, ಅದಕ್ಕೆ ಅನುಗುಣವಾಗಿ ೨೦೧೮- ೧೯ನೇ ಸಾಲಿನ ೩೭ ಫಲಾನುಭವಿಗಳಿಗೆ ಪಂಪು ಮೋಟಾರ್ ವಿತರಿಸಲಾಗುತ್ತಿದೆ, ೨೦೧೯- ೨೦, ೨೦೨೦- ೨೧ ನೇ ಸಾಲಿನ ಫಲಾನುಭವಿಗಳಿಗೆ ಪಂಪು ಮೋಟಾರ್ಗಳನ್ನು ಶೀಘ್ರವಾಗಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧೀಕ್ಷಕ ತಿಮ್ಮರಾಯಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಡಿ.ಜಯರಾಮಣ್ಣ, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಹೆಚ್.ರಾಜಶೇಖರ್, ಮಾಜಿ ಜಿಪಂ ಸದಸ್ಯ ಪ್ರಕಾಶ್ ಗೌಡ, ತರೂರು ಬಸವರಾಜ್, ಕೋಟೆ ರವಿ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!