ಕೊರಟಗೆರೆ: ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನ ಅರ್ಧ ರಾತ್ರಿ ಮನೆಯ ಬಾಗಲು ಒಡೆದು ತಾಯಿಯ ಎದುರೆ ಅಪಹರಣ ಮಾಡಿಕೊಂಡು ಪರಾರಿಯಾಗಿರುವ ಘಟನೆಯೊಂದು ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕೋಳಾಲ ಹೋಬಳಿ ಪುರದಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದು, ಮಂಜುನಾಥ್ ಎಂಬುವರ ಮಗಳು (೧೭ ವರ್ಷ) ಅಪಹರಣಕ್ಕೊಳಗಾದ ವಿದ್ಯಾರ್ಥಿನಿಯಾಗಿದ್ದಾಳೆ.
ಶನಿವಾರ ಮಧ್ಯರಾತ್ರಿ ಮಂಜುನಾಥ್ ಅವರ ಮಡದಿ ಸುಮಾ ಹಾಗೂ ವಿದ್ಯಾರ್ಥಿನಿ ಮನೆಯಲ್ಲಿ ಮಲಗಿರುವ ಸಂದರ್ಭದಲ್ಲಿ ಮಧ್ಯರಾತ್ರಿ ಯಾರೋ ಬಾಗಿಲು ಒಡೆದು ಕಳ್ಳತನಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದಿದ್ದ ತಾಯಿಯ ಎದುರಲ್ಲೇ ಮಗಳನ್ನ ದ್ವಿಚಕ್ರ ವಾಹನದಲ್ಲಿ ಅಪಹರಿಸಿಕೊಂಡು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ ಎಂದು ತಾಯಿ ಸುಮಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೋಳಾಲ ಪಿಎಸ್ಐ ಮಹಾಲಕ್ಷ್ಮಮ್ಮ ದೂರಿನ ಜಾಡು ಹಿಡಿದು ತನಿಖೆ ನಡೆಸಿದಾಗ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಶರಶೇಟಿಹಳ್ಳಿ ಗ್ರಾಮದ ಹನುಮಂತರಾಯಪ್ಪ ಎಂಬುವರ ಮಗ ಮಂಜುನಾಥ್ ಎಂಬುವವರು ಮತ್ತೊಬ್ಬ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂದು ಹುಡುಗಿಯನ್ನ ದ್ವಿಚಕ್ರ ವಾಹನದಲ್ಲಿ ತಾಯಿಯ ಎದುರೆ ಕೂರಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.
ಈ ಪ್ರಕರಣ ಮೇಲ್ನೋಟಕ್ಕೆ ಅಪಹರಣ ಎಂದು ತಿಳಿದು ಬಂದರೂ ಅಪಹರಣಕ್ಕೊಳಗಾದ ರಂಜಿತಾ ಹಾಗೂ ಆರೋಪಿ ಮಂಜುನಾಥ್ ನಿಂದ ತನಿಖೆಯ ನಂತರ ಸತ್ಯಾಸತ್ಯತೆ ಹೊರಬರಲಿದೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಮಹಾಲಕ್ಷ್ಮಮ್ಮ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿನಿ ಅಪಹರಣ
Get real time updates directly on you device, subscribe now.
Prev Post
Next Post
Comments are closed.