೧೨ ರಿಂದ ೧೪ ವರ್ಷ ಮಕ್ಕಳಿಗೆ ಲಸಿಕೆ ಹಾಕಿಸಿ: ಸಿಇಓ

124

Get real time updates directly on you device, subscribe now.

ತುಮಕೂರು: ಜಿಲ್ಲೆಯಲ್ಲಿ ಕೋವಿಡ್- ೧೯ ಸೋಂಕು ತಡೆಗಟ್ಟಲು ೧೨ ರಿಂದ ೧೪ ವರ್ಷದೊಳಗಿನ ಎಲ್ಲಾ ಅರ್ಹ ಮಕ್ಕಳಿಗೂ ಕೋರ್ಬಿವ್ಯಾಕ್ಸ್ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.
ಜಿಲ್ಲಾ ಆಸ್ಪತ್ರೆಯ ಕೋವಿಡ್ ಲಸಿಕಾ ಕೇಂದ್ರದಲ್ಲಿ ಸಾಂಕೇತಿಕವಾಗಿ ಲಸಿಕೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ೨೦೧೦ರ ಮಾರ್ಚ್ ೧೫ ಅಥವಾ ಅದಕ್ಕೂ ಮುನ್ನ ಜನಿಸಿದ (೧೨ ವರ್ಷ ಪೂರೈಸಿದ) ಮಕ್ಕಳು ಮಾತ್ರ ಕೋರ್ಬಿವ್ಯಾಕ್ಸ್ ಲಸಿಕಾಕರಣಕ್ಕೆ ಅರ್ಹರಾಗಿರುತ್ತಾರೆ ಎಂದರಲ್ಲದೆ ಫಲಾನುಭವಿಗಳು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿಯಾಗಿದ್ದರೂ ಲಸಿಕಾಕರಣಕ್ಕೆ ಮೊದಲು ಸಂಬAಧಿಸಿದ ವ್ಯಾಕ್ಸಿನೇಟರ್ ಗಳು ಮತ್ತು ಪರಿಶೀಲಕರು ವಯಸ್ಸಿನ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಬಿ.ನಾಗೇಂದ್ರಪ್ಪ ಮಾತನಾಡಿ, ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ೧೨ ರಿಂದ ೧೪ ವರ್ಷದೊಳಗಿನ ಅರ್ಹ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲಾಗುವುದು. ವ್ಯವಸ್ಥೆ ಸ್ಥಿರಗೊಂಡ ನಂತರ ಶಾಲೆಗಳಲ್ಲಿ ಲಸಿಕಾಕರಣ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆರ್ಸಿಎಚ್ ಅಧಿಕಾರಿ ಡಾ.ಕೇಶವ್ರಾಜ್ ಮಾತನಾಡಿ, ಜಿಲ್ಲೆಯಲ್ಲಿ ೯೨,೩೭೩ ಅರ್ಹ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈಗಾಗಲೇ ೬೦,೦೦೦ ಲಸಿಕೆ ದಾಸ್ತಾನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೇಯರ್ ಬಿ.ಜಿ. ಕೃಷ್ಣಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಟಿ.ಎ.ಡಾ.ವೀರಭದ್ರಯ್ಯ, ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಮೋಹನ್ ದಾಸ್ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!