ತುಮಕೂರು: ಕೊರೋನಾ ವೈರಸ್ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆ ವತಿಯಿಂದ ರೂ.50 ಲಕ್ಷ ರೂ.ಗಳ ಡಿಡಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.
ಸಿದ್ಧಗಂಗಾ ಮಠದಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಿದ್ಧಗಂಗಾ ಮಠದಿಂದ ರೂ.25 ಲಕ್ಷ ರೂ. ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ ರೂ.25 ಲಕ್ಷ ರೂ.ಗಳು ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಸಿದ್ಧಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ.ನಂಜುಂಡಪ್ಪ, ಮತ್ತಿತರರು ಹಾಜರಿದ್ದರು.
ಚುಂಚನಗಿರಿ ಮಠದಿಂದ 50 ಲಕ್ಷ ಘೋಷಣೆ
ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದಾ ಸ್ವಾಮೀಜಿ ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರನಿಧಿಗೆ ರೂ.50 ಲಕ್ಷ ದೇಣಿಗೆ ನೀಡಿದರು. ಕಾರ್ಗಿಲ್ ಸಂತ್ರಸ್ತರಿಗೆ, ಕೊಡಗಿನ ನೆರೆ ಸಂತ್ರಸ್ತರಿಗೆ ಸೇರಿದಂತೆ ಹಲವು ಸಂದರ್ಭದಲ್ಲಿ ಶ್ರೀಮಠವು ರಾಜ್ಯದ ಜನರ ಪರವಾಗಿ ನಿಂತಿದೆ. ಇಂಥ ಸಂಧರ್ಭದಲ್ಲಿ ರಾಜ್ಯ ಸರಕಾರವು ಹೆಚ್ಚಿನ ಮಟ್ಟದಲ್ಲಿ ಕರೋನಾ ಸೋಂಕು ಹರಡದಂತೆ ತಡೆಯಲು ನಡೆಸುತ್ತಿರುವ ಆಂದೋಲನಕ್ಕೆ ಮಠವು ಸಹ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಇದೇ ಸಂಧರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 50 ಲಕ್ಷ ಪರಿಹಾರ ಘೋಷಿಸಿದರು.
Comments are closed.