ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಿ

ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ

153

Get real time updates directly on you device, subscribe now.

ತುಮಕೂರು: ತುಮಕೂರು ಮತ್ತು ಮಧÄಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಾರ್ಚ್ ೨೮ ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಲೋಪದೋಷವಿಲ್ಲದೇ ಸುಸೂತ್ರವಾಗಿ ಪರೀಕ್ಷೆ ನಡೆಯುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪೂರ್ವ ಸಿದ್ಧತಾ ಸಭೆ ನಡೆಸಿ ಮಾತನಾಡಿ, ಪರೀಕ್ಷೆ ನಡೆಯಲಿರುವ ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಸೇರಿದಂತೆ ಒಟ್ಟು ೧೫೬ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದರಲ್ಲದೆ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಟೇಬಲ್, ಕುಡಿಯುವ ನೀರು, ಶೌಚಾಲಯ, ಮತ್ತಿತರ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು, ಪರೀಕ್ಷೆಗೂ ಮುನ್ನ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಜೇಷನ್ ಮಾಡಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ, ಉತ್ತರ ಪತ್ರಿಕೆಗಳನ್ನು ತರುವಾಗ ಸೂಕ್ತ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಕ್ರಮವಹಿಸಬೇಕು, ಅಲ್ಲದೇ ಪರೀಕ್ಷಾ ಕಾರ್ಯಕ್ಕಾಗಿ ವಾಹನಗಳ ವ್ಯವಸ್ಥೆ ಕಲ್ಪಿಸುವಂತೆ ಆರ್ಟಿಓ ರಾಜು ಅವರಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ನೇಮಕ ಮಾಡಬೇಕು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯನ್ನು ಥರ್ಮಲ್ ಸ್ಕ್ಯಾನಿಂಗ್ಗೆ ಒಳಪಡಿಸಬೇಕು, ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿದ್ದಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು, ಪರೀಕ್ಷಾ ದಿನದಂದು ಸಕಾಲದಲ್ಲಿ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪುವಂತೆ ಅಗತ್ಯ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ಉದ್ದೆÃಶದಿಂದ ಪರೀಕ್ಷಾ ದಿನಗಳಂದು ಪ್ರವೇಶ ಪತ್ರದೊಂದಿಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಬೇಕು ಹಾಗೂ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಸಮಯಕ್ಕೆ ಪೂರಕವಾಗಿ ಬಸ್ ಮಾರ್ಗ ಕಲ್ಪಿಸಬೇಕೆಂದು ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಶ್ನೆಪತ್ರಿಕೆ ಭದ್ರತೆ, ಸಕಾಲದಲ್ಲಿ ಪ್ರಶ್ನೆ ಪತ್ರಿಕೆಯನ್ನು ಕೇಂದ್ರಗಳಿಗೆ ಒದಗಿಸುವ, ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳುವ, ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವ ಕಾರ್ಯವನ್ನು ಆಯಾ ತಾಲ್ಲೂಕು ದಂಡಾಧಿಕಾರಿಗಳು, ಖಜಾನೆ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸಬೇಕು. ಯಾವುದೇ ಗೊಂದಲವಿಲ್ಲದೆ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ವಯ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದರಲ್ಲದೆ, ಪರೀಕ್ಷಾ ಕಾರ್ಯಕ್ಕಾಗಿ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿ ಗೈರು ಹಾಜರಾಗದೆ ಸಮಯ ಪಾಲನೆ ಮಾಡುವ ಮೂಲಕ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಸಭೆಗೆ ಮಾಹಿತಿ ನೀಡುತ್ತಾ, ತುಮಕೂರಿನ ೨೨೮೫೮ ಹಾಗೂ ಮಧುಗಿರಿಯ ೧೩೦೭೪ ಸೇರಿದಂತೆ ಒಟ್ಟು ೩೫೯೩೨ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಾಯಿಸಿಕೊAಡಿದ್ದು, ಪರೀಕ್ಷೆ ಸುಗಮವಾಗಿ ನಡೆಸುವ ದೃಷ್ಟಿಯಿಂದ ಅಗತ್ಯವಿರುವ ೨೯೦ ಪೊಲೀಸ್ ಸಿಬ್ಬಂದಿ, ೨೯೦ ಪ್ಯಾರಾ ಮೆಡಿಕಲ್ ಸಿಬ್ಬಂದಿ, ೩೮೨ ಸ್ವಯಂ ಸೇವಕರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆಯಲ್ಲದೆ, ಪ್ರಶ್ನೆ ಪತ್ರಿಕೆಗಳ ಸಾಗಾಣಿಕೆಗಾಗಿ ೬೨ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳಾದ ವಿ.ಅಜಯ್ ಹಾಗೂ ಸೋಮಪ್ಪ ಕಡಕೋಳ, ತಹಶೀಲ್ದಾರರು, ಡಯಟ್ ಪ್ರಿನ್ಸಿಪಾಲ್ ಮಂಜುನಾಥ, ಮಾಧವರೆಡ್ಡಿ, ವಿವಿಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!