ವ್ಯಕ್ತಿ ಆತ್ಮಹತ್ಯೆ

432

Get real time updates directly on you device, subscribe now.

ಕೊರಟಗೆರೆ: ಹೊಟೆನೋವು ತಾಳಲಾರದೇ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ವೀರಸಾಗರ ಗ್ರಾಮದ ಲೇ.ಮುತ್ತಯ್ಯನ ಮಗನಾದ ರಂಗಶಾಮಯ್ಯ (೬೫) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಕಳೆದ ಹಲವು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದೆ. ತೀವ್ರವಾಗಿ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಸ್ಥಳಕ್ಕೆ ಪಿಎಸೈ ಮಹಾಲಕ್ಷ್ಮಮ್ಮ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!