ತುಮಕೂರು: ಮಾರ್ಚ್ ೧೯ ರಂದು ಶನಿವಾರ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಬಸ್ ಭೀಕರ ಅಪಘಾತಕ್ಕೀಡಾಗಿ ಅನೇಕ ಸಾವು ನೋವು ಉಂಟಾಗಿದ್ದವು ಸುಮಾರು ಆರು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದು ೨೦ಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಈ ಘಟನೆ ನಡೆದು ನಾಲ್ಕೈದು ದಿನ ಕಳೆದರೂ ಸರ್ಕಾರ ವಿದ್ಯಾರ್ಥಿಗಳ ಕುಟುಂಬಕ್ಕೆ ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಯಾವುದೇ ರೀತಿಯ ಪರಿಹಾರ ಘೋಷಿಸಿಲ್ಲ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ತುಮಕೂರು ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬಸ್ ದುರಂತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಕುಟುಂಬಸ್ಥರು ಚಿಕಿತ್ಸೆ ಕೊಡಿಸಲು ಹಣವಿಲ್ಲದೆ ಪರದಾಡುತ್ತಿದ್ದಾರೆ ಇದನ್ನು ವಿವಿಧ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರ ಕುಟುಂಬಕ್ಕೆ ಶೀಘ್ರವಾಗಿ ಪರಿಹಾರ ಕಲ್ಪಿಸಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು. ಈ ವೇಳೆ ಮಾತನಾಡಿದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ರಫೀಕ್ ಅಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ೨೫ ಲಕ್ಷ ಪರಿಹಾರವನ್ನು ನೀಡಬೇಕು ಮತ್ತು ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ವೆಚ್ಚ ಮತ್ತು ಕುಟುಂಬ ನಿರ್ವಹಣೆಗಾಗಿ ೨೦ ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲದ ಕಾರಣಕ್ಕಾಗಿ ಆ ಭಾಗದಲ್ಲಿ ಅಪಘಾತ ಸಂಭವಿಸಿದೆ ಆದ್ದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಶಾಲಾ-ಕಾಲೇಜು ವೇಳಾಪಟ್ಟಿಯ ಸಮಯಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ದುರಂತದಿಂದ ಪರೀಕ್ಷೆಗೆ ಬಾರದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನೀಡಿ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಅಲ್ಲದೆ ದುರಂತದಿಂದ ತರಗತಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಬೇಕು ಎಲ್ಲಾ ಬೇಡಿಕೆಗಳನ್ನು ಸರ್ಕಾರ ಕೂಡಲೇ ಸೂಕ್ತವಾಗಿ ನೀಡಬೇಕು ಎಂದು ಅವರು ಈ ವೇಳೆ ಒತ್ತಾಯಿಸಿದರು. ಜಿಲ್ಲಾಡಳಿತ ಮತ್ತು ಸರ್ಕಾರ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಗಾಯಗೊಂಡ ಕುಟುಂಬಕ್ಕೆ ಶೀಘ್ರವೇ ಪರಿಹಾರ ಕಲ್ಪಿಸಲು ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ವಿದ್ಯಾರ್ಥಿಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಶೀಘ್ರ ಪರಿಹಾರ ಕಲ್ಪಿಸಲು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ನೀಡಿದರು.
ಪ್ರತಿಭಟನೆ ವೇಳೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ರಫೀಕ್ ಅಲಿ, ಸೋಶಿಯಲ್ ಮೀಡಿಯಾ ಇಂಚಾರ್ಜ್ ಅಬ್ದುಲ್ ಸಮ್ಮಾನ್ ಅಮಾನುಲ್ಲಾ ಖಾನ್, ಮನೋಜ್, ಎಂಐಸಿಯು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಜೈನ್ ಶರೀಫ್ ಸೇರಿದಂತೆ ಹಲವರು ಹಾಜರಿದ್ದರು.
ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ನೀಡಿ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಘಟಕದಿಂದ ಪ್ರತಿಭಟನೆ
Get real time updates directly on you device, subscribe now.
Prev Post
Comments are closed.