ತುಮಕೂರು: ಅಮೃತ್ ಯೋಜನೆ ಹಾಗೂ ಜಲಜೀವನ್ ಮಿಷನ್ನ ಯೋಜನೆಯಡಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ನಗರದ ಗಂಗಸಂದ್ರದ ಅಮಾನಿಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಸಂಸದ ಜಿ.ಎಸ್.ಬಸವರಾಜು ಪರಿಶೀಲನೆ ನಡೆಸಿದರು.
ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಗಂಗಸಂದ್ರ ಕೆರೆಗೆ ಭೇಟಿ ನೀಡಿದ ಸಂಸದರು ಕೆರೆ ಏರಿ ಮೇಲೆ ಸಂಚರಿಸಿ ಅಮಾನಿಕೆರೆ ವೀಕ್ಷಿಸಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಂಗಸಂದ್ರ ಅಮಾನಿಕೆರೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಮಾತನಾಡಿದ ಸಂಸದ ಜಿ.ಎಸ್.ಬಸವರಾಜು, ಅಮೃತ್ ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿಗಾಗಿ ರಾಜ್ಯದಲ್ಲಿ 20 ಕೆರೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ, ಅದೇ ರೀತಿ ಗಂಗಸಂದ್ರ ಭಾಗದ ಜನರ ಕುಡಿಯುವ ನೀರಿಗಾಗಿ ತುಮಕೂರು ಅಭಿವೃದ್ಧಿ ಪ್ರಾಧಿಕಾರವು ಈ ಕೆರೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ಈ ಕೆರೆಯ ನೀರನ್ನು ಮರಳೂರು ಕೆರೆಗೂ ಹರಿಸುವ ಮೂಲಕ ಸುಮಾರು 60 ರಿಂದ 65 ಎಂಸಿಎಫ್ಟಿ ನೀರನ್ನು ಸಂಗ್ರಹಣೆ ಮಾಡಿ 2 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದರು.
ನಗರಕ್ಕೆ ಸಮೀಪ ಇರುವ ಗಂಗಸಂದ್ರ ಕೆರೆಯನ್ನು ಸುಂದರ ಮತ್ತು ಪ್ರವಾಸಿ ತಾಣವಾಗಿ ನಿರ್ಮಿಸುವುದರ ಜೊತೆಗೆ ವಾಯು ವಿಹಾರಿಗಳಿಗೆ ಅನುಕೂಲವಾಗುವಂತೆ ವಾಕಿಂಗ್ ಪಾತ್ ಸಹ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಗಂಗಸಂದ್ರ ಕೆರೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೆರೆ ಅಭಿವೃದ್ಧಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಅವರು, 2ನೇ ಹಂತದಲ್ಲಿ ಕೆರೆ ಮತ್ತಷ್ಟು ಅಭಿವೃದ್ಧಿಪಡಿಸಲು ಸಣ್ಣ ನೀರಾವರಿ ಇಲಾಖೆಗೆ ಪ್ರಸಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಈ ಯೋಜನೆಯಡಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡಿದ್ದು, ಕಾಮಗಾರಿ ಯಶಸ್ವಿಯಾಗಿ ನಡೆಯಲಿ ಎಂದರು.
ಈ ಸಂದರ್ಭದಲ್ಲಿ ಎಸ್.ಶಿವಪ್ರಸಾದ್, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ರವಿ ಅನ್ಸೂರನ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ್ ಹೆಚ್.ಕೆ., ಸಹಾಯಕ ಇಂಜಿನಿಯರ್ ಚಂದ್ರು ಹಾಜರಿದ್ದರು.
ಸಂಸದರಿಂದ ಗಂಗಸಂದ್ರ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ
Get real time updates directly on you device, subscribe now.
Prev Post
Next Post
Comments are closed.