ಎಸ್.ಎಸ್.ಎಲ್.ಸಿ ಪರೀಕ್ಷೆ ಸುಸೂತ್ರ

ಹಿಜಾಬ್ ಗಲಾಟೆ ಕಾಣಲಿಲ್ಲ- ವಿದ್ಯಾರ್ಥಿಗಳಲ್ಲಿ ಗೊಂದಲವೂ ಇರಲಿಲ್ಲ- ಪರೀಕ್ಷಾ ಕೇಂದ್ರಗಳಿಗೆ ಡೀಸಿ, ಸಿಇಓ ಭೇಟಿ

166

Get real time updates directly on you device, subscribe now.

ತುಮಕೂರು: ಕಳೆದ 2 ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಕೇವಲ ಎರಡು ದಿನಕ್ಕೆ ಸೀಮಿತವಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಜಿಲ್ಲೆಯ ತುಮಕೂರು ಶೈಕ್ಷಣಿಕ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 35,925 ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆದಿದ್ದಾರೆ.

ಹಿಜಾಬ್ ನ ಬಿಕ್ಕಟ್ಟಿನ ನಡುವೆಯೂ ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 22858 ಹಾಗೂ ಮಧುಗಿರಿಯಲ್ಲಿ 13,067 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 35925 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 91 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 65 ಸೇರಿ ಒಟ್ಟು 156 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೆÇಲೀಸ್ ಭದ್ರತೆಯೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ.
ಸೋಮವಾರ ಬೆಳಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳ ಮುಂದೆ ಜಮಾಯಿಸಿ ನೋಂದಣಿ ಸಂಖ್ಯೆ ಮತ್ತು ಕೊಠಡಿ ಹುಡುಕಿಕೊಂಡು ಪರೀಕ್ಷೆ ಬರೆಯಲು ಉತ್ಸಾಹದಿಂದ ತೆರಳಿದ ದೃಶ್ಯಗಳು ಜಿಲ್ಲೆಯಾದ್ಯಂತ ಕಂಡು ಬಂದವು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಬರೆಯಲು ತೆರಳಿದ ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದ್ದು ವಿಶೇಷವಾಗಿತ್ತು.
ಹಿಜಾಬ್ ಗೊಂದಲ ಇಲ್ಲ
ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ಗೊಂದಲ ಕಂಡು ಬಂದಿಲ್ಲ, ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಗಳು ಹಿಜಾಬ್ ನ್ನು ಪರೀಕ್ಷಾ ಕೇಂದ್ರದ ಹೊರಗಡೆ ತೆಗೆದು ಪರೀಕ್ಷಾ ಕೊಠಡಿಗಳಿಗೆ ತೆರಳಿ ಪರೀಕ್ಷೆಗೆ ಹಾಜರಾಗಿದ್ದು ಸಾಮಾನ್ಯ ದೃಶ್ಯವಾಗಿತ್ತು. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ಗೆ ಸಂಬಂಧಿಸಿದ ಗೊಂದಲು ನಡೆದಿರುವ ಬಗ್ಗೆ ವರದಿಯಾಗಿಲ್ಲ, ಎಲ್ಲರೂ ನ್ಯಾಯಾಲಯದ ತೀರ್ಪನ್ನು ಪಾಲಿಸಿಯೇ ಪರೀಕ್ಷೆಗೆ ಹಾಜರಾಗಿದ್ದಾರೆ.
ಶಾಸಕರ ಭೇಟಿ
ನಗರದ ಎಂಪ್ರೆಸ್ ಪರೀಕ್ಷಾ ಕೇಂದ್ರಕ್ಕೆ ಶಾಸಕ ಜ್ಯೋತಿಗಣೇಶ್ ಭೇಟಿ ನೀಡಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿ ಶುಭಾಕೋರಿದರು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಸಲಹೆ ನೀಡಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬದುಕಿಗೆ ದಿಕ್ಸೂಚಿ ಇದ್ದಂತೆ, ಹಾಗಾಗಿ ಯಾವುದೇ ಒತ್ತಡಕ್ಕೆ ಒಳಗಾಗಿ ನಿರ್ಭೀತಿಯಿಂದ ಪರೀಕ್ಷೆ ಎದುರಿಸಬೇಕು ಎಂದ ಅವರು, ಫೋಷಕರು ಸಹ ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಹೇರದೆ ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದರು.
ತುಮಕೂರು ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ತಿಳಿಸಿದರು.
ಡೀಸಿ-ಸಿಇಓ ಭೇಟಿ
ನಗರದ ಎಂಪ್ರೆಸ್, ಆರ್ಯನ್ ಹೈಸ್ಕೂಲ್ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಡಿಡಿಪಿಐ ಸಿ. ನಂಜಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಲ್ಪತರು ನಾಡಿನ ಎರಡು ಶೈಕ್ಷಣಿಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಿಗಿ ಪೆÇಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ.

Get real time updates directly on you device, subscribe now.

Comments are closed.

error: Content is protected !!